Publish Date: Wed, 10 Jan 2018 (12:52 IST)
Updated Date: Wed, 10 Jan 2018 (12:58 IST)
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಸಿಎಂ ಸಿದ್ದರಾಮಯ್ಯ ಅವರು ತಮ್ಮನ್ನು ಪ್ರಧಾನಿ ಮೋದಿ ಅವರಿಗೆ ಹೋಲಿಸಿಕೊಳ್ಳುತ್ತಿದ್ದಾರೆ ಎಂದು ಸಿಎಂ ವಿರುದ್ಧ ಕಿಡಿ ಕಾರಿದ್ದಾರೆ.
ಮಾಧ್ಯಮವೊಂದರಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ‘ ಸಮಾಜ ಕಲ್ಯಾಣ ಇಲಾಖೆಯಿಂದ 600 ಕೋಟಿ ರೂ. ಹಗರಣ ನಡೆದಿದೆ. ಹಾಸಿಗೆ, ದಿಂಬು, ಬೆಡ್ ಶಟ್ ಖರೀದಿಯಲ್ಲೂ ಹಗರಣ ಮಾಡಿದ್ದಾರೆ. ಸಿದ್ದರಾಮಯ್ಯ, ಪ್ರಧಾನಿ ಮೋದಿ ಹೋಲಿಕೆಯೇ ಅಕ್ಷಮ್ಯ ಅಪರಾಧ. ಇದು ಮೂರ್ಖತನದ ಪರಮಾವಧಿ. ಮೋದಿ ಅವರಿಗೆ ತಮ್ಮನ್ನು ಹೋಲಿಕೆ ಮಾಡಿಕೊಳ್ಳುತ್ತಿರುವುದು ಇದೇ ಮೊದಲಲ್ಲ. ಹಾಗಾದರೆ ಸಿಎಂ ಸಿದ್ದರಾಮಯ್ಯ ಅವರು ಪ್ರಚಾರಕ್ಕಾಗಿ ವಿದೇಶಿ ಕಂಪೆನಿಗೆ 600 ಕೋಟಿ ಕೊಟ್ಟಿದ್ದು ಸುಳ್ಳಾ. ಜನರ ತೆರಿಗೆ ಹಣವನ್ನು ಸಿ.ಎಂ. ಲೂಟಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಜನರ ಮೂಗಿಗೆ ತುಪ್ಪ ಸವರುತ್ತಿದ್ದಾರೆ. ಇದರ ಬಗ್ಗೆ ಅವರು ಯಾಕೆ ಮಾತನಾಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ