Publish Date: Tue, 19 Dec 2017 (11:47 IST)
Updated Date: Tue, 19 Dec 2017 (11:51 IST)
ಕೊಪ್ಪಳ: ಯಡಿಯೂರಪ್ಪ ಅವರಿಗೆ ಹೃದಯಾಘಾತವಾಗಿದೆ ಎಂದು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದ್ದ ಸುದ್ದಿ ಸುಳ್ಳು ಎಂದು ಖುದ್ದಾಗಿ ಯಡಿಯೂರಪ್ಪ ಅವರು ಕೊಪ್ಪಳದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ನಿನ್ನೆ ಗುಜರಾತ್ ಚುನಾವಣೆಯ ಫಲಿತಾಂಶವನ್ನು ತಮ್ಮ ನಿವಾಸದಲ್ಲೇ ಕುಳಿತು ವೀಕ್ಷಿಸುತ್ತಿದ್ದಾಗ ಯಡಿಯೂರಪ್ಪ ಅವರಿಗೆ ಹೃದಯಾಘಾತವಾಗಿ ಕುಸಿದು ಬಿದ್ದರು.. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಸುದ್ದಿ ಸಾಮಾಜಿಕ ತಾಣಗಳಲ್ಲಿ ಹರಿಬಿಡಲಾಗಿತ್ತು.
ಇದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಅವರು ತಾನು ಚೆನ್ನಾಗಿಯೇ ಇದ್ದೇನೆ ಎಂದು ಕೊಪ್ಪಳದಲ್ಲಿ ಮಾಧ್ಯಮಗಳ ಮುಂದೆ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ