Publish Date: Tue, 03 Apr 2018 (09:31 IST)
Updated Date: Tue, 03 Apr 2018 (09:34 IST)
ಶಿವಮೊಗ್ಗ: ಸಾಗರ ವಿಧಾನಸಭೆ ಟಿಕೆಟ್ ವಿಚಾರದಲ್ಲಿ ಅಸಮಾಧಾನಗೊಂಡಿದ್ದ ಹರತಾಳು ಹಾಲಪ್ಪ ಕಾಂಗ್ರೆಸ್ ಸೇರ್ಪಡೆಗೆ ಮನಸ್ಸು ಮಾಡಿದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸಂಧಾನ ಮಾತುಕತೆ ನಡೆಸಿದ್ದು, ಬಹುತೇಕ ಪಕ್ಷದಲ್ಲೇ ಉಳಿಸಿಕೊಳ್ಳಲು ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.
ಎರಡು ದಿನಗಳಿಂದ ಬಿಜೆಪಿ ನಾಯಕರ ಕೈಗೆ ಸಿಗದೇ ಓಡಾಡುತ್ತಿದ್ದ ಹಾಲಪ್ಪ ಕೊನೆಗೂ ಯಡಿಯೂರಪ್ಪ ಜತೆ ಮಾತುಕತೆ ನಡೆಸಿದ್ದಾರೆ. ಶೋಭಾಕರಂದ್ಲಾಜೆ ಮಧ್ಯಸ್ಥಿಕೆಯಲ್ಲಿ ಸಂಧಾನ ಮಾತುಕತೆ ನಡೆಸಿದ ಯಡಿಯೂರಪ್ಪ, ಪಕ್ಷದ ಸ್ಥಿತಿ ಗತಿಯನ್ನು ಮನವರಿಕೆ ಮಾಡಿಕೊಡಲು ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.
ನಿಮಗೆ ಟಿಕೆಟ್ ಕೊಟ್ಟರೆ ಗೆಲುವು ಕಷ್ಟ ಎಂದು ಆಂತರಿಕ ಸಮೀಕ್ಷೆ ಹೇಳಿದ ಕಾರಣ ಟಿಕೆಟ್ ನಿರಾಕರಿಸಲಾಗಿತ್ತು. ಕಷ್ಟದಲ್ಲಿ ಜತೆಯಾಗಿದ್ದ ಪಕ್ಷವನ್ನು ಬಿಟ್ಟು ಬೇರೆ ಪಕ್ಷಕ್ಕೆ ಹೋದರೆ ಜನರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ಯಡಿಯೂರಪ್ಪ ಮನವರಿಕೆ ಮಾಡಿಕೊಟ್ಟರು ಎನ್ನಲಾಗಿದೆ. ಈ ವೇಳೆ ಹಾಲಪ್ಪ ಕೂಡಾ ಪಕ್ಷದ ಪರವಾಗಿ ಕೆಲಸ ಮಾಡುವುದಾಗಿ ಭರವಸೆ ಕೊಟ್ಟರು ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ