Publish Date: Wed, 27 Sep 2023 (17:21 IST)
Updated Date: Wed, 27 Sep 2023 (17:24 IST)
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ, 15ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆ ಮಳೆಯಾಗುವ ನಿರೀಕ್ಷೆ ಇದೆ.