Publish Date: Sat, 30 Sep 2023 (21:12 IST)
Updated Date: Sat, 30 Sep 2023 (19:16 IST)
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯ ಒಂದೆರಡು ಕಡೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಕೊಡಗಿನಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾದರೆ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಸುರಿಯಲಿದೆ. ಉತ್ತರ ಒಳನಾಡಿನ. ಕಲಬುರಗಿ, ರಾಯಚೂರು, ವಿಜಯಪುರ, ಧಾರವಾಡ ಮತ್ತು ಯಾದಗಿರಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರದ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.ಇನ್ನು ರಾಮನಗರ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.