Publish Date: Sat, 16 Dec 2017 (14:00 IST)
Updated Date: Sat, 16 Dec 2017 (14:10 IST)
ಬೆಂಗಳೂರು: ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಅವರ ಪತ್ನಿ ಮಲ್ಲಮ್ಮ ಈಗ ಯೂಟರ್ನ್ ಹೊಡೆದಿದ್ದಾರೆ. ಕಾಣೆಯಾಗಿದ್ದರೆ ಎಂಬ ಸುದ್ದಿಯಲ್ಲಿದ್ದ ಮಲ್ಲಮ್ಮ ಇಂದು ಬೆಂಗಳೂರಿಗೆ ಬಂದು ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದಾರೆ. ಅದೂ ಅಲ್ಲದೇ ಕುಟುಂಬ ಸದಸ್ಯರ ವಿರುದ್ಧ ಮಹಿಳಾ ಆಯೋಗಕ್ಕೆ ದೂರ ನೀಡಿದ್ದಾರೆ.
ನನ್ನ ವಿರುದ್ಧ ಇಡೀ ಕುಟುಂಬ ಇಲ್ಲಸಲ್ಲದ ಆರೋಪ ಮಾಡುತ್ತಿದೆ. ನನ್ನ ಸ್ವಂತ ಇಚ್ಚೆಯಂತೆ ನಾನು ಕಾಂಗ್ರೆಸ್ ಸೇರುತ್ತಿದ್ದೇನೆ. ಸಿಎಂ ಸಿದ್ದರಾಮಯ್ಯ ನನ್ನ ತಂದೆ ಇದ್ದಂತೆ ಎಂದು ಹೇಳಿದ್ದಾರೆ. ಕುಟುಂಬದ ಸದಸ್ಯರ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.
ತನ್ನ ಗಂಡ ಯೋಗೇಶ್ ಗೌಡ ಕೊಲೆಯಲ್ಲಿ ವಿನಯ್ ಕುಲಕರ್ಣಿ ಕೈವಾಡವಿದೆ ಎಂದು ಅಂದು ಮಲ್ಲಮ್ಮ ಆರೋಪಿಸಿದ್ದರು. ಯೋಗೇಶ್ ಗೌಡ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿದ್ದರು. ಆದರೆ ಈಗ ಮಲ್ಲಮ್ಮ ಬೇರೊಂದು ರೀತಿ ಹೇಳಿಕೆ ನೀಡುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ