Publish Date: Thu, 09 Apr 2026 (14:29 IST)
Updated Date: Thu, 09 Apr 2026 (14:35 IST)
ಬೆಂಗಳೂರು: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 21 ಆರೋಪಿಗಳಾಗಿರುವ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಏಪ್ರಿಲ್ 15ಕ್ಕೆ ನ್ಯಾಯಾಲಯ ಮುಂದೂಡಿದೆ.
ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಆದೇಶ ಪ್ರಕಟಿಸುವುದಾಗಿ ಹೇಳಿತ್ತು. ಇನ್ನೂ ಈ ಪ್ರಕರಣ ಸಂಬಂಧ ಮಹತ್ವದ ಆದೇಶ ಹೊರಬೀಳುವ ಹಿನ್ನೆಲೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ 21 ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಇನ್ನೂ ಕೋರ್ಟ್‌ಗೆ ಹಾಜರಾಗುವ ಮುನ್ನಾ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಅವರು ದೇವರ ಮೇಲೆ ಭರವಸೆ ಇದೆ. ಸತ್ಯಕ್ಕೆ ಯಾವತ್ತೂ ಜಯ ಸಿಗಲಿದೆ ಎಂಬ ನಂಬಿಕೆಯಿದೆ ಎಂದು ಹೇಳಿದ್ದರು.
ಕೋರ್ಟ್ ಮೇಲೆ ಭರವಸೆ ಇದೆ. ಪ್ರಕರಣ ನ್ಯಾಯಾಲಯದಲ್ಲಿ ಇರುವಾಗ ಮಾಧ್ಯಮದ ಮುಂದೆ ಮಾತನಾಡುವುದು ಸರಿಯಲ್ಲ. ಕೋರ್ಟ್ ತೀರ್ಪು ಪ್ರಕಟಿಸಲಿ ಎಂದು ಮಾಹಿತಿ ನೀಡಿದರು.