Publish Date: Fri, 24 Nov 2017 (13:21 IST)
Updated Date: Fri, 24 Nov 2017 (13:23 IST)
ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆಗೆ ಸಂಬಂಧಿಸಿದಂತೆ ಯೋಗೇಶ್ ಗೌಡ ಪರ ವಕೀಲರಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ವಿನಯ್ ಕುಲಕರ್ಣಿ ಅವಾಜ್ ಹಾಕಿದ ಘಟನೆ ವರದಿಯಾಗಿದೆ.
ಬಿಜೆಪಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್ ಗೌಡ ಹತ್ಯೆಯ ಹಿನ್ನೆಲೆಯಲ್ಲಿ ಅವರ ಪರವಾಗಿ ವಾದಿಸುತ್ತಿದ್ದ ವಕೀಲರಿಗೆ ಅಸಭ್ಯ ಪದಗಳನ್ನು ಬಳಸಿ ಟೀಕಿಸಿದ ಆಡಿಯೋ ಬಹಿರಂಗವಾಗಿದೆ.
ಆಡಿಯೋದಲ್ಲಿರುವ ನನ್ನ ಧ್ವನಿಯಲ್ಲ ಎಂದು ಸಚಿವ ವಿನಯ್ ಕುಲಕರ್ಣಿ ಸ್ಪಷ್ಟಪಡಿಸಿದ್ದು, ಯೋಗೇಶ್ ಗೌಡ ಹತ್ಯೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.
ನನ್ನ ರಾಜಕೀಯ ಏಳಿಗೆಯನ್ನು ಸಹಿಸದ ಕೆಲವರು ನನಗೆ ಕೆಟ್ಟ ಹೆಸರು ತರುವ ಸಂಚು ರೂಪಿಸಿದ್ದಾರೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ವಿನಯ್ ಕುಲಕರ್ಣಿ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.