Publish Date: Fri, 17 Apr 2026 (16:38 IST)
Updated Date: Fri, 17 Apr 2026 (16:40 IST)
ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಬಿಜೆಪಿಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜನಪ್ರತಿನಿಧಿಗಳ ಕೋರ್ಟ್ ಜೀವಾವಧಿ ಜೈಲು ಶಿಕ್ಷೆ ವಿಧಿಸಿದೆ.
ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಶಿಕ್ಷೆಯ ಪ್ರಮಾಣ ಪ್ರಕಟಿಸಲಾಗಿದೆ. 17 ನೇ ಅಪರಾಧಿ ಟಿಂಗರೀಕರ್ ಗೆ 7 ವರ್ಷದ ಜೈಲು ಮತ್ತು 30000 ರೂ. ದಂಡ ವಿಧಿಸಲಾಗಿದೆ. ಮೊನ್ನೆಯಷ್ಟೇ ಜನಪ್ರತಿನಿಧಿಗಳ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ವಿನಯ್ ಕುಲಕರ್ಣಿ ಮತ್ತು ಸಹಚರರು ದೋಷಿಗಳು ಎಂದು ತೀರ್ಪು ಪ್ರಕಟಿಸಿದ್ದರು.
ಇದರ ಬೆನ್ನಲ್ಲೇ ಈ ಕೇಸ್ ವಿಚಾರಣೆ ನಡೆಸಿದ್ದ ಸಿಬಿಐ ತಂಡ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿ ಜೈಲಿಗೆ ಕರೆದೊಯ್ದಿತ್ತು. ನಿನ್ನೆ ಶಿಕ್ಷೆಯ ಪ್ರಮಾಣ ಕುರಿತಂತೆ ನ್ಯಾಯಾಲಯದಲ್ಲಿ ವಾದ-ವಿವಾದ ನಡೆದಿತ್ತು. ಇದರ ಬಳಿಕ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಇಂದಿಗೆ ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ಘೋಷಿಸಿದ್ದರು.
ಅದರಂತೆ ಇಂದು ಎಲ್ಲಾ ಆರೋಪಿಗಳಿಗೆ ಶಿಕ್ಷೆ ಪ್ರಮಾಣ ಪ್ರಕಟಿಸಲಾಗಿದೆ. ಇದಕ್ಕಾಗಿ ಇಂದು ಎಲ್ಲಾ ಅಪರಾಧಿಗಳನ್ನು ಕೋರ್ಟ್ ಹಾಲ್ ಗೆ ಕರೆದುಕೊಂಡು ಬರಲಾಗಿತ್ತು. 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಉಳಿದಂತೆ 16 ಲಕ್ಷ ರೂ. ದಂಡದ ಮೊತ್ತ ನಿಗದಿ ಮಾಡಲಾಗಿದೆ. ಇದನ್ನು ಯೋಗೇಶ್ ಗೌಡ ಮಕ್ಕಳು ಮತ್ತು ಸಹೋದರರಿಗೆ ನೀಡಲು ಕೋರ್ಟ್ ಸೂಚಿಸಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ