Publish Date: Wed, 23 Oct 2024 (15:42 IST)
Updated Date: Wed, 23 Oct 2024 (15:45 IST)
ಬೆಂಗಳೂರು: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಿಪಿ ಯೋಗೇಶ್ವರ್ ನಡೆಗೆ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಗೆ ಸೇರ್ಪಡೆಯಾದ ಸಿ.ಪಿ.ಯೋಗೇಶ್ವರ್ ಬಿಜೆಪಿಗೆ ದ್ರೋಹ ಬಗೆದಿದ್ದಷ್ಟೇ ಅಲ್ಲ, ತಮ್ಮ ರಾಜಕೀಯ ಭವಿಷ್ಯವನ್ನು ತಾವೇ ಕೈಯಾರೆ ಹಾಳು ಮಾಡಿಕೊಂಡಿದ್ದಾರೆ ಎಂದು ಎಂದು ಸಿಟ್ಟು ತೋಡಿಕೊಂಡರು.
ನನಗೆ ಯೋಗೇಶ್ವರ್ ನಡೆ ಬಗ್ಗೆ ಅನುಮಾನವಿತ್ತು, ವಿಧಾನ ಪರಿಷತ್ ಸದಸ್ಯತ್ವಕ್ಕೆ ತರಾತುರಿಯಲ್ಲಿ ರಾಜೀನಾಮೆ ನೀಡಿದರೂ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು, ಟಿಕೆಟ್ ಕೊಡಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೆವು ಎಂದು ಅಭಿಪ್ರಾಯ ಹೊರಹಾಕಿದರು.
ಚನ್ನಪಟ್ಟಣ ಎಚ್.ಡಿ.ಕುಮಾರಸ್ವಾಮಿ ಪ್ರತಿನಿಧಿಸಿ ಜಯ ಸಾಧಿಸಿದ ಕ್ಷೇತ್ರ. ಇದರಲ್ಲಿ ಅವರ ನಿರ್ಣಯವೇ ಮುಖ್ಯವಾಗಿತ್ತು. ಕುಮಾರಸ್ವಾಮಿ ಅವರಿಗೆ ಯೋಗೇಶ್ವರ್ ಅವರು ಕಾಂಗ್ರೆಸ್ ನಾಯಕರೊಂದಿಗೆ ಸಂಪರ್ಕದಲ್ಲಿರುವುದು ತಿಳಿದಿತ್ತು. ಈ ವಿಚಾರವಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಂಪರ್ಕಿಸಿದ ವೇಳೆ ಈ ವಿಷಯ ತಿಳಿಸಿದ್ದರು ಎಂದರು.