Publish Date: Sat, 14 Oct 2017 (14:19 IST)
Updated Date: Sat, 14 Oct 2017 (14:20 IST)
ಚನ್ನಪಟ್ಟಣ ಕ್ಷೇತ್ರದ ಶಾಸಕ ಸಿ.ಪಿ.ಯೋಗೇಶ್ವರ್ ರಾಜೀನಾಮೆ ನೀಡಿದ್ದರಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಶಾಸಕ ಯೋಗೇಶ್ವರ್ ಅವರಿಗೆ ಕಾಂಗ್ರೆಸ್ ಪಕ್ಷ ಉತ್ತಮ ಸ್ಥಾನಮಾನ ನೀಡಿದೆ. ಅವರು ಹೇಳಿದ ವ್ಯಕ್ತಿಗಳಿಗೆ ಜಿಲ್ಲಾ ಪಂಚಾಯಿತಿಯಲ್ಲಿ ಟಿಕೆಟ್ ನೀಡಲಾಗಿದೆ. ಕೇವಲ ರಾಜಕೀಯ ಕಾರಣಗಳಿಗಾಗಿ ಆರೋಪಿಸುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಯೋಗೇಶ್ವರ್ ಅವರಿಗೆ ನೀಡಿದ ಗೌರವವನ್ನು ಬೇರೆ ಯಾವ ಪಕ್ಷವು ನೀಡಲು ಸಾಧ್ಯವಿಲ್ಲ. ಅವರಿಗೆ ಪಕ್ಷವನ್ನು ತೊರೆಯಲು ಸ್ವಾತಂತ್ರ್ಯವಿದೆ.ಅವರು ಹೊರಹೋಗಲು ಮುಕ್ತರಾಗಿದ್ದಾರೆ ಎಂದು ಹೇಳಿದ್ದಾರೆ.
ನಾನು ಸೇರಿದಂತೆ ಕಾಂಗ್ರೆಸ್ ಪಕ್ಷದ ಯಾವುದೇ ಸದಸ್ಯರು ಅವರಿಗೆ ಅಪಮಾನ ಮಾಡಿಲ್ಲ. ಅವರ ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.