ಬೆಂಗಳೂರು: ರಾಜ್ಯದ ಕಾಂಗ್ರೆಸ್ ಪಕ್ಷದವರು ಬಜೆಟ್ ನಮಗೆ ಏನೂ ಕೊಟ್ಟಿಲ್ಲ ಎನ್ನುತ್ತಿದ್ದಾರೆ. ನಿಮಗೆ ಕೊಟ್ಟರೆ ತಿಂದು ಹಾಕ್ತೀರಾ, ಅದಕ್ಕೆ ಬಡವರಿಗೆ ಕೊಟ್ಟಿದ್ದಾರೆ ಎಂದು ಆರ್.ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು.
ಕೇಂದ್ರ ಬಜೆಟ್‌ಗೆ ಸಂಬಂಧಿಸಿದಂತೆ ನಗರದಲ್ಲಿ ಮಾತನಾಡಿದ ಅವರು, ಕಿಸಾನ್ ಕ್ರೆಡಿಟ್ ಕಾರ್ಡ್ ರೈತರಿಗೆ ಸಾಲದ ಮಿತಿಯನ್ನು ಹೆಚ್ಚಿಸಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ರೈತರ ಪರ ಎಂದು ತೋರಿಸಿಕೊಟ್ಟಿದ್ದಾರೆ.
ಅದಲ್ಲದೆ ಸಪಿಎಂ ಧನ್ ಯೋಜನೆ ಅಡಿ ಸಾಲ ಸೌಲಭ್ಯ ಹೆಚ್ಚಿಸಿದ್ದಾರೆ. ಕೈಗಾರಿಕಾ ಸ್ಟಾರ್ಟ್ ಅಪ್‌ಗಳಿಗೆ ಉತ್ತೇಜನ ನೀಡಿದ್ದಾರೆ. ಇನ್ನೂ ಮೊದಲ ಬಾರಿಗೆ ಉದ್ಯಮ ಸ್ಥಾಪಿಸುವ ಎಸ್‌ಸಿ, ಎಸ್‌ಟಿ ಮಹಿಳೆಯರಿಗೆ 5 ಲಕ್ಷ ರೂ. ಸಾಲ ಸೌಲಭ್ಯ ಒದಗಿಸಿದ್ದಾರೆ. ಮಧ್ಯಮ ವರ್ಗದವರಿಗೆ ಬಂಪರ್ ಮೇಲೆ ಬಂಪರ್ ಕೊಟ್ಟು, ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. 1 ಲಕ್ಷ ರೂ. ಸಂಬಳ ತೆಗೆದುಕೊಳ್ಳುವವರಿಗೆ ನೋ ಟ್ಯಾಕ್ಸ್ ಎನ್ನುವ ಮೂಲಕ ಉತ್ತಮ ಬಜೆಟ್ ಮಂಡಿಸಿದ್ದಾರೆ ಎಂದು ಅಭಿಪ್ರಾಯ ಹೊರಹಾಕಿದರು.
ಸಿಎಂ ಸಿದ್ದರಾಮಯ್ಯನವರು ರಾಜ್ಯದಲ್ಲಿ ಎಲ್ಲ ತೆರಿಗೆ ಹಾಕಿದ್ದಾರೆ. ಪಾಪಿ ಕಾಂಗ್ರೆಸ್ ಅವರು ತೆರಿಗೆ ಹಾಕಿ ಜನರ ಸುಲಿಗೆ ಮಾಡ್ತಿದ್ದಾರೆ. ಇನ್ನೂ ಕಾಂಗ್ರೆಸ್ ಅವರು ತಾರತಮ್ಯದ ಬಗ್ಗೆ ಮಾತಾಡ್ತಾರೆ ಎಂದು ವ್ಯಂಗ್ಯ ಮಾಡಿದರು.
ಆದರೆ 50 ವರ್ಷಗಳ ಅವಧಿಗೆ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ ಕೊಡುವ ಘೋಷಣೆ ಆಗಿದೆ. ಕಾಂಗ್ರೆಸ್ ಅವರು ನಮಗೆ ಏನೂ ಕೊಟ್ಟಿಲ್ಲ ಎನ್ನುತ್ತಿದ್ದಾರೆ. ಆದರೆ ಅವರಿಗೆ ಕೊಟ್ಟರೆ ತಿಂದು ಹಾಕಿ ಬಿಡುತ್ತಾರೆ ಎಂದು ಬಡವರಿಗೆ ಕೊಟ್ಟಿದ್ದಾರೆ. ನಿಮ್ಗೆ ಕೊಟ್ರೆ ತಿಂದು ಹಾಕ್ಬಿಡ್ತೀರಾ ಎಂದು ವ್ಯಂಗ್ಯವಾಡಿದರು.<>