Publish Date: Thu, 06 Jul 2023 (11:25 IST)
Updated Date: Thu, 06 Jul 2023 (12:27 IST)
ಬೆಂಗಳೂರು : ನಾಗಮಂಗಲದಲ್ಲಿ ಕೆಎಸ್ಆರ್ಟಿಸಿ ಚಾಲಕ ಆತ್ಮಹತ್ಯೆಗೆ ಯತ್ನಿಸಿದ್ದು ಯಾವ ಕಾರಣಕ್ಕೆ ಎಂಬ ಬಗ್ಗೆ ಮಾಹಿತಿ ಇಲ್ಲ. ವರ್ಗಾವಣೆ ಯಾವ ಕಾರಣಕ್ಕೆ ಎಂಬ ಮಾಹಿತಿ ತರಿಸಿಕೊಳ್ಳುತ್ತೇನೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿಕೆ ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲ ಬಸ್ ಡಿಪೋದ ಚಾಲಕ ಜಗದೀಶ್, ಸಚಿವ ಚಲುವರಾಯಸ್ವಾಮಿ ಸೂಚನೆಯಂತೆ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ತೀವ್ರ ಅಸ್ವಸ್ಥರಾಗಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ರಾಮಲಿಂಗಾ ರೆಡ್ಡಿ, ಯಾವ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಮಾಹಿತಿಯಿಲ್ಲ.
ಯಾರಾದ್ರೂ ಕಂಡಕ್ಟರ್, ಡ್ರೈವರ್ ವರ್ಗಾವಣೆಗೆ ನಮ್ಮವರೆಗೂ ಬರುತ್ತಾರಾ ಎಂದು ಪ್ರಶ್ನಿಸಿದರು. ಘಟನೆಯ ಕುರಿತು ಎಂಡಿ ಬೆಳಗ್ಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ವರ್ಗಾವಣೆ ಯಾವ ಕಾರಣಕ್ಕೆ ಎಂಬ ಮಾಹಿತಿಯನ್ನು ತರಿಸಿಕೊಳ್ಳುತ್ತೇನೆ.