Publish Date: Sun, 07 Apr 2024 (12:50 IST)
Updated Date: Sun, 07 Apr 2024 (12:56 IST)
ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಲು ಪಕ್ಷದ ಹಿತದೃಷ್ಟಿಯಿಂದ ಕೆ.ಎಸ್.ಈಶ್ವರಪ್ಪ ಅವರು ನಮ್ಮೊಂದಿಗೆ ಕೈಜೋಡಿಸಬೇಕು. ಈಗಲೂ ಕಾಲ ಮಿಂಚಿಲ್ಲ. ವಾಪಸ್ ಬನ್ನಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮನವಿ ಮಾಡಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಈಶ್ವರಪ್ಪ ನೀವು ಬಿಜೆಪಿಯ ಹಿರಿಯರು. ರಾಜ್ಯದಲ್ಲಿ ಬಿಜೆಪಿ ಕಟ್ಟಲು ನಿಮ್ಮದೂ ದೊಡ್ಡ ಪಾಲಿದೆ. ಯಾವುದೋ ಪರಿಸ್ಥಿತಿ, ತಪ್ಪು ಸಂದರ್ಭ ತಮ್ಮನ್ನು ಈ ಸನ್ನಿವೇಶಕ್ಕೆ ದೂಡಿದೆ. ಕಾಲ ಮಿಂಚಿಲ್ಲ ವಾಪಸ್ ಬನ್ನಿ' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮನವಿ ಮಾಡಿದರು.
ಈಶ್ವರಪ್ಪ ಅವರಿಗೆ ಸಮಸ್ಯೆ ಇದ್ದರೆ ದೆಹಲಿ ನಾಯಕರ ಜೊತೆ ಮಾತನಾಡಲಿ. ನಾವು ಅವರ ಜತೆ ಇರುತ್ತೇವೆ. ಅವರೂ ನಮ್ಮ ಜೊತೆ ಇರಬೇಕು ಎಂಬುದು ಆಸೆ ಎಂದು ಬಿ ವೈ ವಿಜಯೇಂದ್ರ ಅವರು ಮತ್ತೇ ಒಲವು ತೋರಿದರು.
ಪ್ಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದು ಕಾಂಗ್ರೆಸ್ ಪಕ್ಷವನ್ನು ನಿದ್ರೆಗೆಡಿಸಿದೆ. ನರೇಂದ್ರ ಮೋದಿ ಪ್ರತಿ ಕುಟುಂಬಕ್ಕೆ ಐದು ಕೆ.ಜಿ ಅಕ್ಕಿ ಕೊಡುತ್ತಿದ್ದಾರೆ. ರೈತರಿಗೆ ಕಿಸಾನ್ ಸಮ್ಮಾನ್ ಕೊಡುತ್ತಿದ್ದಾರೆ ಎಂದು ಹೇಳಿದರು.