Select Your Language

Notifications

webdunia
webdunia
webdunia
webdunia

ಖಾಸಗಿ ಪರಿಸರದಲ್ಲಿ ಪ್ರೇಮಿಗಳು ಹೇಗಿರಬೇಕು ಎಂಬುದಕ್ಕೆ ಈ ಘಟನೆ ಪಾಠವಾಯ್ತು!

ಖಾಸಗಿ ಪರಿಸರದಲ್ಲಿ ಪ್ರೇಮಿಗಳು ಹೇಗಿರಬೇಕು ಎಂಬುದಕ್ಕೆ ಈ ಘಟನೆ ಪಾಠವಾಯ್ತು!
ಬೆಂಗಳೂರು , ಬುಧವಾರ, 2 ಫೆಬ್ರವರಿ 2022 (09:18 IST)
ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಪ್ರೇಮಿಗಳು ಚೆಲ್ಲು ಚೆಲ್ಲಾಗಿ ಆಡುವ ಮೊದಲು ಎಚ್ಚರವಾಗಿರಬೇಕು ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಯುವಕನೊಬ್ಬ ತನ್ನ ಗೆಳತಿಯೊಂದಿಗಿನ ಖಾಸಗಿ ಕ್ಷಣಗಳ ವಿಡಿಯೋವನ್ನು ಅಶ್ಲೀಲ ವೆಬ್ ಸೈಟ್ ನಲ್ಲಿ ನೋಡಿ ಶಾಕ್ ಆಗಿದ್ದಾನೆ.

ಯುವಕ ಖಾಸಗಿ ಹೋಟೆಲ್ ನಲ್ಲಿ ಗೆಳತಿಯೊಂದಿಗಿದ್ದಾಗ ಯಾರೋ ಕಿಡಿಗೇಡಿಗಳು ವಿಡಿಯೋ ಮಾಡಿ ಅಶ್ಲೀಲ ವೆಬ್ ಸೈಟ್ ನಲ್ಲಿ ಹರಿಯಬಿಟ್ಟಿದ್ದಾರೆ. ಇದು ಯುವಕನ ಗಮನಕ್ಕೆ ಬಂದಿದ್ದು, ತಕ್ಷಣವೇ ಸೈಬರ್ ಕ್ರೈಂ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಈ ವಿಡಿಯೋದಲ್ಲಿ ಮುಖ ಮರೆಮಾಚಲಾಗಿದೆಯಾದರೂ ಎದೆಯ ಮೇಲಿನ ಮಚ್ಚೆಯಿಂದ ಇದು ತನ್ನದೇ ವಿಡಿಯೋ ಎಂದು ಯುವಕನಿಗೆ ಗೊತ್ತಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಟೆಲಿ ಮೆಂಟಲ್ ಕಾರ್ಯಕ್ರಮ ಘೋಷಣೆ!