Select Your Language

Notifications

webdunia
webdunia
webdunia
webdunia

ರಾಜ್ಯೋತ್ಸವ ಸಂಭ್ರಮದಲ್ಲಿ ಯುವಕನಿಗೆ ಚಾಕುವಿನಿಂದ ಇರಿದ ಕಿಡಿಗೇಡಿಗಳು

ರಾಜ್ಯೋತ್ಸವ ಸಂಭ್ರಮದಲ್ಲಿ ಯುವಕನಿಗೆ ಚಾಕುವಿನಿಂದ ಇರಿದ ಕಿಡಿಗೇಡಿಗಳು
ಬೆಳಗಾವಿ , ಬುಧವಾರ, 1 ನವೆಂಬರ್ 2017 (19:20 IST)
ಬೆಳಗಾವಿ: ರಾಜ್ಯದೆಲ್ಲೆಡೆ 62ನೇ ಕರ್ನಾಟಕ ರಾಜ್ಯೋತ್ಸವವನ್ನು ಅದ್ಧೂರಿಗೆ ಆಚರಿಸಲಾಯಿತು. ಆದರೆ ಕುಂದಾನಗರಿ ಬೆಳಗಾವಿಯಲ್ಲಿ ಅಹಿತಕರ ಘಟನೆ ನಡೆದಿದೆ.

ರಾಜ್ಯೋತ್ಸವದ ಅಂಗವಾಗಿ ಈ ಸಂಭ್ರಮದಲ್ಲಿ 50 ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ಮೆರವಣಿಗೆ ಸಹ ಶಾಂತ ರೀತಿಯಲ್ಲಿ ನಡೆಯುತ್ತಿತ್ತು. ಇದೇ ಸಂದರ್ಭದಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಏಕಾಏಕಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಓರ್ವ ಯುವಕನ ಬೆನ್ನಿಗೆ ಚೂರಿಯಿಂದ ಇರಿದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ.

ಇನ್ನು ಕಲ್ಲುತೂರಾಟದಲ್ಲಿ ಮತ್ತೋರ್ವ ಯುವಕನ ತಲೆಗೆ ಗಂಭೀರ ಗಾಯಗಳಾಗಿವೆ. ಇಬ್ಬರೂ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಂಸದರು, ಶಾಸಕರ ಕ್ರಿಮಿನಲ್ ಕೇಸ್‌ಗಳ ವಿವರಣೆ ನೀಡಿ: ಕೇಂದ್ರಕ್ಕೆ ಸುಪ್ರೀಂಕೋರ್ಟ್ ತಾಕೀತು