Select Your Language

Notifications

webdunia
webdunia
webdunia
webdunia

ಕಾಡಾನೆ ದಾಳಿಗೆ ಯುವಕ ಬಲಿ

Young victim of forest attack
ಸಕಲೇಶಪುರ , ಮಂಗಳವಾರ, 1 ನವೆಂಬರ್ 2022 (16:05 IST)
ಇತ್ತೀಚಿನ ದಿನಗಳಲ್ಲಿ ಕಾಡಾನೆಗಳು ನಾಡಿಗೆ ಲಗ್ಗೆ ನೀಡುವುದು ಹೊಸದೇನಲ್ಲ, ಹಾಸನ ಜಿಲ್ಲೆಯಲ್ಲಿ ದಿನೇದಿನೇ ಕಾಡಾನೆ ಉಪಟಳ ಹೆಚ್ಚಾಗುತ್ತಿದ್ದು, ಕಾಡಾನೆ ದಾಳಿಗೆ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದಲ್ಲಿ ನಡೆದಿದೆ. ದೇವಾಲಯದಲ್ಲಿ ಪೂಜೆ ಮುಗಿಸಿ ವಾಪಸ್ಸಾಗುವ ವೇಳೆ ಘಟನೆ ನಡೆದಿದ್ದು, 34 ವರ್ಷದ ಮನು ಎಂಬ ಯುವಕ ಕಾಡಾನೆ ದಾಳಿಗೆ ಬಲಿಯಾಗಿದ್ದಾನೆ. ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ದ ಆಕ್ರೋಶ ಹೊರಹಾಕಿದ ಸ್ಥಳಿಯರು ಹಾಗೂ ಸಂಬಂಧಿಕರು ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಬರುವವರೆಗೂ ಮೃತ ದೇಹ ಎತ್ತಲು ಬಿಡೋದಿಲ್ಲ ಎಂದು ಪಟ್ಟು ಹಿಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ರಾಜರತ್ನನಿಗೆ ಕರ್ನಾಟಕ ರತ್ನ