ಚಿರತೆ ದಾಳಿಗೆ ಯುವತಿ ಸಾವು

Webdunia
ಶುಕ್ರವಾರ, 2 ಡಿಸೆಂಬರ್ 2022 (18:47 IST)
ಒಂದೇ ತಿಂಗಳ ಅಂತರದಲ್ಲಿ ಒಂದೇ ತಾಲೂಕಿನಲ್ಲಿ ಚಿರತೆ ದಾಳಿಗೆ ಇಬ್ಬರು ಬಲಿಯಾಗಿದ್ದಾರೆ. ಹೌದು, ಚಿರತೆ ಉಪಟಳದಿಂದ
ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಜನ ಭಯಭೀತಿಗೊಂಡಿದ್ದಾರೆ. ಗುರುವಾರ ರಾತ್ರಿ ಮನೆ ಮುಂದೆ ಕುಳಿತಿದ್ದ ಯುವತಿ ಮೇಲೆ‌ ದಾಳಿ ಮಾಡಿದ ಚಿರತೆ ಆಕೆಯನ್ನು ಕೊಂದು ಬಿಸಾಕಿದೆ. ತಿಂಗಳ ಹಿಂದೆಯಷ್ಟೇ ಚಿರತೆ ದಾಳಿಯಿಂದ ಟಿ.ನರಸೀಪುರ ತಾಲೂಕಿನ ಎಂ.ಎಲ್.ಹುಂಡಿಯ ಯುವಕನೊಬ್ಬ ಬಲಿಯಾದ. ಅದರ ಕರಾಳ ನೆನಪು ಮಾಸುವ ಮುನ್ನವೇ ಚಿರತೆ ಮತ್ತೊಂದು ಬಲಿಯನ್ನು ಪಡೆದಿದೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದ ಮೇಘನಾ (22) ಎಂಬ ಯುವತಿಯು ಚಿರತೆ ದಾಳಿಗೆ ತುತ್ತಾಗಿದ್ದು, ಹಿತ್ತಲಿಗೆ ಹೋಗಿದ್ದ ಸಮಯದಲ್ಲಿ ಚಿರತೆ ದಾಳಿ ನಡೆಸಿದೆ. ಯುವತಿ ಮೇಲೆ ದಾಳಿ ಮಾಡಿದ ಚಿರತೆ ಆಕೆಯ ಕುತ್ತಿಗೆ ಹಾಗೂ ಮುಖದ ಭಾಗಕ್ಕೆ ತೀರ್ವ ಗಾಯಗೊಳಿಸಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಯುವತಿಯನ್ನು ಟಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟಿದ್ದಾಳೆ. ಚಿರತೆ ಹಿಡಿಯುವಂತೆ ಸಾರ್ವಜನಿಕರು ಹಲವು ಬಾರಿ ಮನವಿ ಮಾಡಿದರೂ ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಈಗ ಮತ್ತೊಂದು ಬಡ ಜೀವ ಜೀವ ಕಳೆದುಕೊಂಡಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಕಿತ್ತಾಟಕ್ಕೆ ಬ್ರೇಕ್ ಬೆನ್ನಲ್ಲೇ ಸಚಿವ ಮಹದೇವಪ್ಪ ಹೊಸ ಬಾಂಬ್

ರಾಹುಲ್ ಗಾಂಧಿಗೆ ಚಿತ್ರಹಿಂಸೆ ನೀಡಲು ಬಿಜೆಪಿಯಿಂದ ತನಿಖಾ ಸಂಸ್ಥೆ ದುರ್ಬಳಕೆ: ಶಿವಕುಮಾರ್

ಯಾರು ಕಚ್ಚಬಲ್ಲರೋ ಅವರು ಸರ್ಕಾರವನ್ನು ನಡೆಸುತ್ತಿದ್ದಾರೆ: ರೇಣುಕಾ ಚೌಧರಿ

ರಾಹುಲ್, ಸೋನಿಯಾ ವಿರುದ್ಧ ಎಫ್‌ಐಆರ್‌: ಬಿಜೆಪಿಯಿಂದ ದ್ವೇಷ ರಾಜಕಾರಣ ಎಂದ ಸಿದ್ದರಾಮಯ್ಯ

ಕುರ್ಚಿಗಾಗಿ ಡಿಕೆ ಶಿವಕುಮಾರ್ ಈ ಕೆಲಸ ಮಾಡ್ತಿದ್ದಾರೆ: ಜೆಡಿಎಸ್ ಸ್ಪೋಟಕ ಆರೋಪ

ಮುಂದಿನ ಸುದ್ದಿ
Show comments