Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಅಭಿವೃದ್ಧಿ ಗುರಿ ಹೊಂದಿರುವ ಯುವಕರು ರಾಜಕೀಯಕ್ಕೆ ಬರಲಿ: ನಿಖಿಲ್ ಕುಮಾರ್

webdunia
ಶುಕ್ರವಾರ, 1 ಡಿಸೆಂಬರ್ 2017 (18:41 IST)
ಅಭಿವೃದ್ಧಿ ಗುರಿ ಹೊಂದಿರುವ ಯುವಕರು ರಾಜಕೀಯಕ್ಕೆ ಬರಬೇಕು ಎಂದು ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕರೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಂದೆ ಕುಮಾರಸ್ವಾಮಿಯವರ ಪರವಾಗಿ ರಾಜ್ಯಾದ್ಯಂತ ಪ್ರಚಾರ ಮಾಡಲು ಬಯಸಿದ್ದೇನೆ. ಅವರ ಮನದಾಳದ ವಿಷಯಗಳನ್ನು ಜನತೆಯ ಮುಂದಿಡುತ್ತೇನೆ ಎಂದು ತಿಳಿಸಿದ್ದಾರೆ.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಂದೆ ಕುಮಾರಸ್ವಾಮಿ ಮತ್ತು ದೊಡ್ಡಪ್ಪ ಎಚ್.ಡಿ.ರೇವಣ್ಣ ಮಾತ್ರ ಸ್ಪರ್ಧಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು. ಪ್ರಜ್ವಲ್ ರೇವಣ್ಣ ಚುನಾವಣೆ ಸ್ಪರ್ಧಿಸುವ ಬಗ್ಗೆ ಮಾತನಾಡಲು ನಿರಾಕರಿಸಿದರು. 
 
ಜೆಡಿಎಸ್ ಪಕ್ಷ ಮುಂಬರುವ ಚುನಾವಣೆಯಲ್ಲಿ ಅತಿ ಹೆಚ್ಚು ಸೀಟು ಗೆಲ್ಲುವಂತಾಗಲು ಹಗಲಿರಳು ಶ್ರಮಿಸುತ್ತೇನೆ. ಚುನಾವಣೆ ನಂತರ ಸಿನೆಮಾ ಕ್ಷೇತ್ರದಲ್ಲಿಯೇ ಮುಂದುವರಿಯುವುದಾಗಿ ನಿಖಿಲ್ ಗೌಡ ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಸಿದ್ರಾಮಯ್ಯ ಬಚ್ಚಾ ಬಿಎಸ್‌ವೈ ಹೇಳಿಕೆಗೆ ಸಿಎಂ ತಿರುಗೇಟು