Select Your Language

Notifications

webdunia
webdunia
webdunia
webdunia

ನಿಮ್ಮ ತಂದೆ ಈ ಶತಮಾನದ ನಿಜವಾದ ಕಟ್ಟಪ್ಪ: ಪ್ರಿಯಾಂಕ್‌ ಖರ್ಗೆಗೆ ಆರ್‌ ಅಶೋಕ್‌ ಕೌಂಟರ್‌

Opposition Leader R Ashok, Minister R Ashok, Bidar Contructer Suicide Case

Sampriya

ಬೆಂಗಳೂರು , ಭಾನುವಾರ, 5 ಜನವರಿ 2025 (16:18 IST)
ಬೆಂಗಳೂರು: ಪಾಪ ನಿಮ್ಮ ತಂದೆಯವರು ಈ ಇಳಿ ವಯಸ್ಸಿನಲ್ಲೂ ಆ ಕಾಮಿಡಿ ಪೀಸ್ ನ ಮಾನ ಉಳಿಸಲು ರಾಜ್ಯದಲ್ಲಿ ಸಿಗಬಹುದಾದ ಅಧಿಕಾರವನ್ನು ತ್ಯಾಗ ಮಾಡಿ ಅಲ್ಲಿ ಆ ಕಾಮಿಡಿ ಪೀಸ್ ಗೆ ರಕ್ಷಣೆ ಕೊಡುತ್ತಿದ್ದಾರಲ್ಲ, ಈ ಶತಮಾನದ ನಿಜವಾದ ಕಟ್ಟಪ್ಪ ಅಂದರೆ ಅದು ನಿಮ್ಮ ತಂದೆಯವರೇ ಎಂದು ಪ್ರಿಯಾಂಕ್‌ ಖರ್ಗೆಗೆ ವಿಪಕ್ಷ ನಾಯಕ ಆರ್‌ ಅಶೋಕ್ ಪೋಸ್ಟ್ ಮಾಡಿ ಕೌಂಟರ್ ನೀಡಿದ್ದಾರೆ.

ಬಿಜೆಪಿಯಲ್ಲಿ ಸಹಮತ, ಸಹಬಾಳ್ವೆ, ಸಮಾಧಾನ ಯಾವುದೂ ಇಲ್ಲದೆ ತಮ್ಮ ಹುಳುಕು ಮುಚ್ಚಿಕೊಳ್ಳಲು "ಪ್ರಿಯಾಂಕ್ ಖರ್ಗೆ" ಹೆಸರಿಗೆ ಜೋತು ಬಿದ್ದಿದೆ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಆರ್‌ ಅಶೋಕ್‌ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದು ತಿರುಗೇಟು ನೀಡಿದ್ದಾರೆ.

ಸ್ವಾಮಿ ಪ್ರಿಯಾಂಕ್‌ ಖರ್ಗೆಸ ಅವರೇ, ಭಾರತೀಯತೆಯೂ ಇಲ್ಲದ, ರಾಷ್ಟ್ರೀಯತೆಯೂ ಇಲ್ಲದ ನಿಮ್ಮ ನಕಲಿ ಗಾಂಧಿ ಕಾಂಗ್ರೆಸ್ ಪಕ್ಷ ಕಳೆದ ಹತ್ತು ವರ್ಷಗಳಿಂದ ಈ ದೇಶದ ಅತೀ ದೊಡ್ಡ ಕಾಮಿಡಿ ಸಿನಿಮಾ ಆಗಿದೆ. ಈ ಸೂಪರ್ ಹಿಟ್ ಕಾಮಿಡಿ ಸಿನಿಮಾದ ಸ್ಟಾರ್ ಕಾಮಿಡಿಯನ್ ಯಾರು ಎಂದು ನಾನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

ಪಾಪ ನಿಮ್ಮ ತಂದೆಯವರು ಈ ಇಳಿ ವಯಸ್ಸಿನಲ್ಲೂ ಆ ಕಾಮಿಡಿ ಪೀಸ್ ನ ಮಾನ ಉಳಿಸಲು ರಾಜ್ಯದಲ್ಲಿ ಸಿಗಬಹುದಾದ ಅಧಿಕಾರವನ್ನು ತ್ಯಾಗ ಮಾಡಿ ಅಲ್ಲಿ ಆ ಕಾಮಿಡಿ ಪೀಸ್ ಗೆ ರಕ್ಷಣೆ ಕೊಡುತ್ತಿದ್ದಾರಲ್ಲ, ಈ ಶತಮಾನದ ನಿಜವಾದ ಕಟ್ಟಪ್ಪ ಅಂದರೆ ಅದು ನಿಮ್ಮ ತಂದೆಯವರೇ.

ಅಂದಹಾಗೆ ಮೊನ್ನೆ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ 35 ಶಾಸಕರು ಸಭೆ ಸೇರಿದ್ದರಂತಲ್ಲ, ಅಲ್ಲಿ ತಾವು ಇದ್ದರೋ? ಅಥವಾ ಆತ್ಮಹತ್ಯೆಗೆ ಕಾರಣವಾದರೂ ಸರಿ, ಕೊಲೆ ಮಾಡಿದರೂ ಸರಿ, ಎಐಸಿಸಿ ಅಧ್ಯಕ್ಷರ ಕೋಟಾದಲ್ಲಿ ತಮ್ಮ ಕುರ್ಚಿ ಮಾತ್ರ ಸುಭದ್ರ ಎಂದು ಯಾವ ಬಣಕ್ಕೂ ಸೇರದೆ ತಟಸ್ಥರಾಗಿರುವ ನಿರ್ಧಾರ ಮಾಡಿದ್ದೀರೋ?

Share this Story:

Follow Webdunia kannada

ಮುಂದಿನ ಸುದ್ದಿ

ಗುಜರಾತ್‌ನ ಪೋರಬಂದರ್‌ನಲ್ಲಿ ಸೇನಾ ಹೆಲಿಕಾಪ್ಟರ್ ಪತನ, ಮೂವರು ದಾರುಣ ಸಾವು