Publish Date: Fri, 18 Feb 2022 (18:41 IST)
Updated Date: Fri, 18 Feb 2022 (17:44 IST)
ವಾಟ್ಸ್ಆಯಪ್, ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಮಹಿಳೆಯರಿಗೆ ಆಶ್ಲೀಲ ಫೋಟೋ ಕಳುಹಿಸಿ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಹಾಸನ ಅರಕಲಗೂಡಿನ ಕಂಚೇನಹಳ್ಳಿ ನಿವಾಸಿ ಹರೀಶ್ ಬಂಧಿತ ಆರೋಪಿ. ಈತ ಕಳೆದ ಮೂರು ತಿಂಗಳಿಂದ ಮಹಿಳೆಯೊಬ್ಬರಿಗೆ ವಾಟ್ಸ್ಆಯಪ್, ಫೇಸ್ಬುಕ್ ಮೂಲಕ ಅಶ್ಲೀಲ ವಿಡಿಯೋಗಳನ್ನು ಕಳುಹಿಸುತ್ತಿದ್ದನು. ಪದೇ ಪದೆ ವಿಡಿಯೋ ಕರೆ ಮಾಡಿ ಕಿರುಕುಳ ನೀಡುತ್ತಿದ್ದನಂತೆ. ಇದರಿಂದ ಬೇಸತ್ತ ಮಹಿಳೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದರು.
ತನಿಖೆ ಕೈಗೊಂಡ ಇನ್ಸ್ಪೆಕ್ಟರ್ಎಸ್.ಟಿ.ಯೋಗೇಶ್ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿತ್ತು. ಈ ವೇಳೆ, ಆರೋಪಿ ನಿತ್ಯ ಹತ್ತಾರು ಮಹಿಳೆಯರಿಗೆ ಆಶ್ಲೀಲ ಫೋಟೋಸ್ ಹಾಗೂ ವಿಡಿಯೋ ಕಳುಹಿಸಿ ಕಿರುಕುಳ ನೀಡುತ್ತಿದ್ದ ಬಗ್ಗೆ ಬೆಳಕಿಗೆ ಬಂದಿದೆ. ಸದ್ಯ ಆರೋಪಿಯನ್ನು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ.