Publish Date: Tue, 02 Feb 2021 (10:15 IST)
Updated Date: Tue, 02 Feb 2021 (10:17 IST)
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕನನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.
26 ವರ್ಷದ ಶ್ರವಣ್ ಕುಮಾರ್ ಬಂಧಿತ ಆರೋಪಿ. ಈತ ಸಾಮಾಜಿಕ ಜಾಲತಾಣದಲ್ಲಿ ಯುವತಿಗೆ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಯುವತಿ ನೀಡಿದ ದೂರಿನ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ. ಕ್ಲಿನಿಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಪರಿಚಯ ಮಾಡಿಕೊಂಡಿದ್ದ ಯುವಕ ಬಳಿಕ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ.