Select Your Language

Notifications

webdunia
webdunia
webdunia
webdunia

ಪ್ರೀತಿ ಸೋಗಿನಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಪ್ರೀತಿ ಸೋಗಿನಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ
ಬೆಂಗಳೂರು , ಸೋಮವಾರ, 5 ಜುಲೈ 2021 (09:40 IST)
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬಾಲಕಿಯನ್ನು ಪರಿಚಯ ಮಾಡಿಕೊಂಡು ಪ್ರೀತಿಸುವ ನೆಪದಲ್ಲಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.


ದರ್ಶನ್ ಎಂಬಾತ ಬಂಧಿತ ಆರೋಪಿ. ಬಾಲಕಿಯ ಪೋಷಕರು ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದರು. ಆನ್ ಲೈನ್ ತರಗತಿಯಲ್ಲಿ ಭಾಗಿಯಾಗಲು ಮಗಳಿಗೆ ಪೋಷಕರು ಮೊಬೈಲ್ ಕೊಡಿಸಿದ್ದರು.

ಆದರೆ ಬಾಲಕಿ ಇನ್ ಸ್ಟಾಗ್ರಾಂ, ಫೇಸ್ ಬುಕ್ ನಲ್ಲಿ ಆಕ್ಟಿವ್ ಆಗಿದ್ದಳು. ಈ ಮೂಲಕ ಪರಿಚಯವಾದ ಆರೋಪಿ ಬಾಲಕಿಯ ಫೋನ್ ನಂಬರ್ ಪಡೆದಿದ್ದ. ಬಳಿಕ ಗೆಳೆಯನ ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಮನೆಗೆ ಬಂದ ಬಳಿಕ ಬಾಲಕಿ ನಡೆದ ವಿಚಾರವನ್ನು ಪೋಷಕರಿಗೆ ತಿಳಿಸಿದ್ದಾಳೆ. ಬಳಿಕ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಳೆರಾಯ ಅನ್​ಲಾಕ್!