ಬೆಂಗಳೂರು: ಹೊಸ ವರ್ಷಾಚರಣೆ ಸಂದರ್ಭ ಕುಡಿದ ಮತ್ತಿನಲ್ಲಿ ಯುವತಿಯನ್ನು ಚುಡಾಯಿಸಿದ ಯುವಕನಿಗೆ ಧರ್ಮದೇಟು ಬಿದ್ದ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ.
ಸರ್ಕಾರ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಿತ್ತು. ಈ ಹೊತ್ತಿನೊಳಗೇ ಕೆಲವರು ಪಾರ್ಟಿ, ಮೋಜು ಮಸ್ತಿ ಮಾಡಿದ್ದರು. ಇದೇ ವೇಳೆ ಪಾನಮತ್ತನಾಗಿದ್ದ ಯುವಕ ಯುವತಿಯನ್ನು ಚುಡಾಯಿಸಿದ್ದ.
ಈ ವೇಳೆ ಅಲ್ಲೇ ಇದ್ದ ಸ್ಥಳೀಯರು ಆತನನ್ನು ಹಿಡಿದು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಬಳಿಕ ಪೊಲೀಸರು ಮಧ್ಯಪ್ರವೇಶಿಸಿ ತಡೆದಿದ್ದು, ಯುವಕನನ್ನು ಠಾಣೆಗೆ ಕರೆದೊಯ್ದಿದ್ದಾರೆ.