Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಪ್ರಧಾನಿ ನರೇಂದ್ರ ಮೋದಿ ಜನ್ಮದಿನವನ್ನ ಯುವ ಕಾಂಗ್ರೆಸ್ ರಾಷ್ಟ್ರೀಯ ನಿರುದ್ಯೋಗ ದಿನವಾಗಿ ಆಚರಣೆ

webdunia
ಶುಕ್ರವಾರ, 17 ಸೆಪ್ಟಂಬರ್ 2021 (21:29 IST)
ಬೆಂಗಳೂರು: . ಯುವ ಕಾಂಗ್ರೆಸ್ ಕಾರ್ಯಕರ್ತರು ರೈಲ್ವೇ ನಿಲ್ದಾಣದಿಂದ ಫ್ರೀಡಂ ಪಾರ್ಕ್​ವರೆಗೆ ಬೃಹತ್​​ ಪ್ರತಿಭಟನಾ ಜಾಥಾ ನಡೆಸಿದರು.
ದೇಶದ ಯುವಜನ ಹಾಗೂ ಎಲ್ಲಾ ವರ್ಗದ ಜನರನ್ನು ಸಂಕಷ್ಟಕ್ಕೆ ತಳ್ಳಿ, ಹೆಚ್ಚು ನಿರುದ್ಯೋಗ ಸಮಸ್ಯೆ ಉಂಟಾಗುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್​​ಡಿಎ ಸರ್ಕಾರ ಕಾರಣ. ಹೀಗಾಗಿ ನರೇಂದ್ರ ಮೋದಿ ಉದ್ಯೋಗ ಕೊಡಿ ಎಂದು ವಿವಿಧ ಪದವೀಧರರು, ಆಟೋ ಚಾಲಕರು, ಕಾರ್ಮಿಕರು ಆಗ್ರಹಿಸಿದರು.
ಯುವ ಕಾಂಗ್ರೆಸ್​​ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಮತ್ತು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಪ್ರತಿಭಟನೆಯ ನೇತೃತ್ವವಹಿಸಿದ್ದರು. ಉದ್ಯೋಗ ಸೃಷ್ಟಿ ಮತ್ತು ಉದ್ಯೋಗ ನಷ್ಟ ತಪ್ಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿ ಪ್ರತಿಭಟನಾಕಾರರು ಘೋಷಣೆ ಕೂಗಿದರು.
ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಮಾತನಾಡಿ, ಪ್ರಧಾನಿ ಅವರ ಹುಟ್ಟುಹಬ್ಬವನ್ನು ಯುವ ಕಾಂಗ್ರೆಸ್ ದೇಶಾದ್ಯಂತ ನಿರುದ್ಯೋಗ ದಿನವನ್ನಾಗಿ ಆಚರಿಸುತ್ತಿರುವುದು ಈ ದೇಶದ ದುರಂತ. ಈ ಸರ್ಕಾರದಿಂದ ಜನ ಸಾಮಾನ್ಯರಿಗೆ ನ್ಯಾಯ ದೊರೆಯುವುದಿಲ್ಲ. ಸ್ವಾತಂತ್ರ್ಯ ಪೂರ್ವದಲ್ಲಿ ನಡೆದ ಕ್ವಿಟ್ ಇಂಡಿಯಾ ಮಾದರಿಯಲ್ಲಿ ಹಾಲಿ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲಾಗುವುದು ಎಂದರು.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಭಾರೀ ಸಂಚಲನಕ್ಕೆ ಕಾರಣವಾಗಿದ್ದ ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರನ ಗಲಾಟೆ