ಸೆಲ್ಫಿ ಕ್ರೇಜ್ ಗೆ ಯುವಕ ಬಲಿ

Webdunia
ಗುರುವಾರ, 18 ನವೆಂಬರ್ 2021 (15:25 IST)
ರೈಲಿನಲ್ಲಿ ಪ್ರಯಾಣಿಸುವಾಗ ಸೆಲ್ಫಿ ಕ್ಲಿಕ್ಕಿಸಲು ಹೋಗಿ ಯುವಕನೊಬ್ಬ ಜೀವ ಕಳೆದುಕೊಂಡಿರುವ ಘಟನೆ ನಡೆದಿದೆ.ಮಂಡ್ಯ ಮೂಲದ ಅಭಿಷೇಕ್ ಮೃತ ಯುವಕನಾಗಿದ್ದು, ಐದು ದಿನಗಳ ಹಿಂದೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಉಪ್ಪಾರಪೇಟೆ, ರೈಲ್ವೆ, ಮಂಡ್ಯ ಪೊಲೀಸರ ಕಾರ್ಯಾಚರಣೆ ವೇಳೆ ಯುವಕನ ಶವ ಪತ್ತೆಯಾಗಿದೆ.ಗಾಂಧಿನಗರದ ಬಾರ್ & ರೆಸ್ಟೋರೆಂಟ್​ನಲ್ಲಿ ಸಹಾಯಕನಾಗಿ ಕೆಲಸ ಮಾಡ್ತಿದ್ದ ಅಭಿಷೇಕ್, ಊರಿಗೆ ಹೋಗಿ ಬರುವುದಾಗಿ ಹೇಳಿ ಸ್ನೇಹಿತರ ಜೊತೆ ಮಂಡ್ಯಕ್ಕೆ ಹೊರಟಿದ್ದ.ಅದರಂತೆ ನವೆಂಬರ್ 6ರ ರಾತ್ರಿ ಅಭಿಷೇಕ್ ಮತ್ತು ಆತನ ಸ್ನೇಹಿತರು ಮಂಡ್ಯಕ್ಕೆ ಹೊರಟಿದ್ದರು.ರಾತ್ರಿ 2 ಗಂಟೆಗೆ ರೈಲಿನ ಬಾಗಿಲಿನಲ್ಲಿ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಅಭಿಷೇಕ್ ಆಕಸ್ಮಿಕವಾಗಿ ನೆಲಕ್ಕೆ ಬಿದ್ದಿದ್ದ. ಸ್ನೇಹಿತರ ಹೇಳಿಕೆಯಂತೆ ಪೊಲೀಸರು ಅಭಿಷೇಕನ ಮೃತ ದೇಹಕ್ಕಾಗಿ ಹುಡುಕಾಟ ನಡೆಸಿದ್ದರು.ಆದರೆ ಕಳೆದ ಒಂದು ವಾರದಿಂದ ಸತತ ಮಳೆ ಆಗುತ್ತಿದೆ. ನದಿಯಲ್ಲಿ ನೀರಿನ ಸೆಳೆತ ಹೆಚ್ಚಾಗಿದ್ದರಿಂದ ನೀರಿನ ರಭಸಕ್ಕೆ ಅಭಿಷೇಕ ಮೃತದೇಹ 6-7 ಕಿ.ಮೀವರೆಗೂ ಕೊಚ್ಚಿ ಹೋಗಿತ್ತು. ನವೆಂಬರ್ 14 ರಂದು ಶ್ರೀರಂಗಪಟ್ಟಣ ಬಳಿ ಅಭಿಷೇಕ್ ಶವ ಪತ್ತೆಯಾಗಿದೆ. ನವೆಂಬರ್ 10 ರಂದು ಉಪ್ಪಾರಪೇಟೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments