ಶಿವಮೊಗ್ಗ-ಯುವನಿಧಿ ಯೋಜನೆಯಡಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಈಗಾಗಲೇ 1,700ಕ್ಕೂ ಹೆಚ್ಚಿನ ಯುವಕ ಯುವತಿಯರು ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ. ಜ. 12ರಂದು ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ ಶಿವಮೊಗ್ಗ ಫ್ರೀಡಂ ಪಾರ್ಕ್‌ನಲ್ಲಿ ಯುವನಿಧಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ಯುವ ನಿಧಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯಲ್ಲಿ ಈ ಯೋಜನೆಯಡಿ ನೋಂದಾಯಿಸಿರುವ ಅಭ್ಯರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.