Publish Date: Sun, 07 Nov 2021 (09:23 IST)
Updated Date: Sun, 07 Nov 2021 (09:26 IST)
ವಿಚ್ಛೇದಿತ ಮಹಿಳೆಯನ್ನು ಆಕೆಯ ಪ್ರಿಯಕರನೇ ಕೊಲೆ ಮಾಡಿರುವ ಘಟನೆ ವಿಜಯನಗರ ಬಳಿ ಪಟ್ಟೇಗಾರಪಾಳ್ಯದ ಬಾಡಿಗೆಮನೆಯಲ್ಲಿ ನಡೆದಿದೆ.
ವೇಲ್‌ನಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಗಾಯತ್ರಿ (26) ಎಂಬಾಕೆಯನ್ನು ಕೊಲೆ ಮಾಡಲಾಗಿದೆ. ಗಾಯತ್ರಿ ಪ್ರಿಯಕರ ಮಂಜುನಾಥ್ ಪ್ರಸಾದ್ ಕೊಲೆ ಆರೋಪಿ. ಆರೋಪಿಯನ್ನು ವಿಜಯನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮನೆಕೆಲಸ ಮಾಡಿಕೊಂಡು ಗಾಯತ್ರಿ ಜೀವನ ಸಾಗಿಸುತ್ತಿದ್ದರು. ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Ramya kosira
Publish Date: Sun, 07 Nov 2021 (09:23 IST)
Updated Date: Sun, 07 Nov 2021 (09:26 IST)