Webdunia - Bharat's app for daily news and videos

Install App

ಚಾಕಲೇಟ್ ಆಸೆ ತೋರಿಸಿ ಅತ್ಯಾಚಾರ

Webdunia
ಭಾನುವಾರ, 21 ಫೆಬ್ರವರಿ 2016 (10:37 IST)
ಚಾಕಲೇಟು ಆಸೆ ತೋರಿಸಿ 6 ವರ್ಷದ ಬಾಲಕಿ ಮೇಲೆ 13 ವರ್ಷದ ಬಾಲಕ ಅತ್ಯಾಚಾರ ಎಸಗಿದ ಘೋರ ಕೃತ್ಯ ಪರಪ್ಪನ ಅಗ್ರಹಾರ ಹತ್ತಿರದ ಕೂಡ್ಲುವಿನಲ್ಲಿ ನಡೆದಿದೆ.
 
2ನೇ ತರಗತಿ ಓದುತ್ತಿರುವ ಬಾಲಕಿಯನ್ನು ಪುಸಲಾಯಿಸಿಕೊಂಡು ತನ್ನ ಮನೆಗೆ ಕರೆದುಕೊಂಡು ಹೋದ ಆಕೆಯ ನೆರೆಮನೆ ಹುಡುಗ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆ ಸಮಯದಲ್ಲಿ ಆತನ ಪೋಷಕರು ಸಹ ಮನೆಯಲ್ಲಿರಲಿಲ್ಲ.
 
ಬಾಲಕಿ ಕಳೆದ ನಾಲ್ಕೈದು ದಿನಗಳಿಂದ ಹೊಟ್ಟೆ ನೋವು ಎಂದು ಹೇಳುತ್ತಿದ್ದರಿಂದ ಶುಕ್ರವಾರ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು ಅತ್ಯಾಚಾರ ನಡೆದಿರುವ ಬಗ್ಗೆ ಖಚಿತ ಪಡಿಸಿದ್ದಾರೆ. 
ಪಾಲಕರು ಬಾಲಕಿಯನ್ನು ವಿಚಾರಿಸಿದಾಗ ಆಕೆ ನಡೆದ ಘಟನೆಯನ್ನು ತಿಳಿಸಿದ್ದಾಳೆ.
 
ಪಾಲಕರು ನೀಡಿದ ದೂರಿನ ಆಧಾರದ ಮೇರೆಗೆ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
 
ಬಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments