Select Your Language

Notifications

webdunia
webdunia
webdunia
webdunia

ಯುವಕನಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ 8 ದಿನ ಸಿಐಡಿ ಕಸ್ಟಡಿಗೆ

suraj revanna

Sampriya

ಬೆಂಗಳೂರು , ಸೋಮವಾರ, 24 ಜೂನ್ 2024 (15:53 IST)
ಬೆಂಗಳೂರು: ಅಸ್ವಾಭಾವಿಕ ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಬಂಧನವಾಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಕೋರ್ಟ್‌ 8 ದಿನ  ಸಿಐಡಿ ಕಸ್ಟಡಿಗೆ ನೀಡಿದೆ.

ಸೂರಜ್ ರೇವಣ್ಣ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿತ್ತು. ಆದರೆ ಅಧಿಕೃತವಾಗಿ ಸಿಐಡಿಗೆ ವರ್ಗಾವಣೆ ಆಗಿರಲಿಲ್ಲ. ಭಾನುವಾರ 42ನೇ ಎಸಿಎಂಎಂ ಕೋರ್ಟ್‌ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಇಂದು ಸೂರಜ್‌ ರೇವಣ್ಣ ಅವರನ್ನು ಪೊಲೀಸರು ಕೋರ್ಟ್‌ಗೆ ಹಾಜರು ಪಡಿಸಿದರು. ವಿಚಾರಣೆ ವೇಳೆ ಸರ್ಕಾರಿ ವಕೀಲರು 14 ದಿನ ಪೊಲೀಸ್‌ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದು, ಅದರಂತೆ ನ್ಯಾಯಾಧೀಶರು 8 ದಿನ ಪೊಲೀಸ್‌ ಕಸ್ಟಡಿಗೆ ನೀಡಿದರು.

ಇನ್ನೂ ಪೊಲೀಸ್ ಕಸ್ಟಡಿ ಅವಧಿ ಜುಲೈ 1ಕ್ಕೆ ಮುಗಿಯುತ್ತಿದ್ದು, ಅಂದು  ಸಂಜೆ 4 ಗಂಟೆಗೆ ಸೂರಜ್‌ ರೇವಣ್ಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸುವಂತೆ ನ್ಯಾಯಾಧೀಶರು ಸಿಐಡಿ ಪೊಲೀಸರಿಗೆ ಸೂಚಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದರ್ಶನ್ ಆಪ್ತೆಯಾಗಿರುವ ಕನ್ನಡದ ನಟಿಯನ್ನು ಮದುವೆಯಾಗಲಿದ್ದಾರಂತೆ ತರುಣ್ ಸುಧೀರ್