Publish Date: Fri, 28 Jun 2024 (16:33 IST)
Updated Date: Fri, 28 Jun 2024 (16:38 IST)
ಬಳ್ಳಾರಿ: ವಾಲ್ಮೀಕಿ ನಿಗನದಲ್ಲಿನ ಹಗರಣ ಸಂಬಂಧ ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಸ್ಥಾನಕ್ಕೆ ಬಿ ನಾಗೇಂದ್ರ ಅವರು ರಾಜೀನಾಮೆ ತೊರೆದಿದ್ದರು.
ಅದರೊಂದಿಗೆ ಬಳ್ಳಾರಿ ಉಸ್ತುವಾರಿ ಸಚಿವ ಸ್ಥಾನವೂ ತೆರವಾಗಿದ್ದಕ್ಕೆ ಜಮೀರ್ ಅಹ್ಮದ್ ಖಾನ್ ಅವರನ್ನು ನೇಮಕ ಮಾಡಲಾಗಿದೆ.
ಹೊಸಪೇಟೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ಬಳ್ಳಾರಿ ಜಿಲ್ಲಾ ಉಸ್ತುವಾರಿಯನ್ನು ಸಚಿವ ಜಮೀರ್‌ಗೆ ವಹಿಸುವುದಾಗಿ ಹೇಳಿದ್ದರು.
ಅದರಂತೆ ಇದೀಗ ರಾಜ್ಯ ಸರ್ಕಾರ ಜಮೀರ್ ಅಹ್ಮದ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿರುವುದಾಗಿ ಅಧಿಕೃತ ಆದೇಶ ಹೊರಡಿಸಿದೆ.