Webdunia - Bharat's app for daily news and videos

Install App

ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ಸಿಎಂ ಪಟ್ಟ ದಲಿತರಿಗೆ ನೀಡ್ತೀರಾ?: ಕುಮಾರಸ್ವಾಮಿಗೆ ಜಮೀರ್ ಟಾಂಗ್

Webdunia
ಮಂಗಳವಾರ, 25 ಅಕ್ಟೋಬರ್ 2016 (15:54 IST)
ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ರಾಜೀನಾಮೆ ನೀಡದ ಬೆನ್ನಲ್ಲೇ ದಲಿತರ ಮೇಲೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಕಾಳಜಿ ಹುಟ್ಟಿದೆ. ಹಾಗದರೇ, ಜೆಡಿಎಸ್ ಅಧಿಕಾರಕ್ಕೆ ಬಂದರೆ ದಲಿತರನ್ನೇ ಸಿಎಂ ಮಾಡುತ್ತೇನೆ ಎಂದು ಹೇಳಲಿ ಎಂದು ಜೆಡಿಎಸ್ ರೆಬಲ್ ಶಾಸಕ ಜಮೀರ್ ಅಹ್ಮದ್ ಟಾಂಗ್ ನೀಡಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿಗೂ ನಾವು ಜೆಡಿಎಸ್ ಪಕ್ಷದಲ್ಲಿಯೇ ಇದ್ದೇವೆ. ನಮ್ಮನ್ನು ನಂಬಿರುವ ಲಕ್ಷಾಂತರ ಕಾರ್ಯಕರ್ತರಿಗಾಗಿ ನಾವು ಪಕ್ಷದಲ್ಲಿಯೇ ಉಳಿದಿದ್ದೇವೆ. ಇದನ್ನು ಎಚ್‌.ಡಿ.ಕುಮಾರಸ್ವಾಮಿ ಅರ್ಥ ಮಾಡಿಕೊಳ್ಳಲಿ ಎಂದು ಹೇಳಿದರು.
 
ವಿಧಾನಸೌಧದಲ್ಲಿ ಜಪ್ತಿಯಾಗಿದ್ದ ಹಣ ಯಾರಿಗೆ ಸೇರಿದೆ ಎನ್ನುವುದು ಬಿಎಸ್‌ವೈಗೆ ಸಂಪೂರ್ಣ ಮಾಹಿತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೀಡಿದ ಹೇಳಿಕೆಯನ್ನು ಖಂಡಿಸಿದ ಅವರು, ಒಬ್ಬ ಮಾಜಿ ಮುಖ್ಯಮಂತ್ರಿಯಾಗಿ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ವಿರುದ್ಧ ಈ ರೀತಿ ಆರೋಪಿಸಿರುವುದು ಅವರಿಗೆ ಶೋಭೆ ತರುವಂತದಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments