ಕರಿಯ ಕುಮಾರಸ್ವಾಮಿ ಬಿಜೆಪಿಗಿಂತ ಡೇಂಜರ್ ಎಂದ ಜಮೀರ್ ಅಹ್ಮದ್

Krishnaveni K
ಸೋಮವಾರ, 11 ನವೆಂಬರ್ 2024 (11:09 IST)
ಚನ್ನಪಟ್ಟಣ: ಉಪಚುನಾವಣೆಯಲ್ಲಿ ರಾಜಕೀಯ ನಾಯಕರ ನಾಲಿಗೆ ಎಲುಬಿಲ್ಲದೇ ಹರಿದಾಡುತ್ತದೆ. ಇದೀಗ ಸಚಿವ ಜಮೀರ್ ಅಹ್ಮದ್ ಕೂಡಾ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಬಗ್ಗೆ ನಾಲಿಗೆ ಹರಿಬಿಟ್ಟಿದ್ದಾರೆ.

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಪರ ಪ್ರಚಾರ ನಡೆಸಿದ್ದ ಜಮೀರ್ ಅಹ್ಮದ್, ಎದುರಾಳಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ತಂದೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರನ್ನು ಕರಿಯ ಎಂದಿದ್ದಾರೆ. ಈ ಮೂಲಕ ಕುಮಾರಸ್ವಾಮಿ ವಿರುದ್ಧ ಜನಾಂಗೀಯ ನಿಂದನೆ ಮಾಡಿದ್ದಾರೆ.

ಉರ್ದುವಿನಲ್ಲಿ ವಾಗ್ದಾಳಿ ನಡೆಸಿದ್ದ ಅವರು ‘ಬಿಜೆಪಿಯವರಿಗಿಂತ ಕಾಲಾ ಕುಮಾರಸ್ವಾಮಿಯವರೇ ಖತರ್ನಾಕ್’ ಎಂದಿದ್ದರು. ಕಾಲಾ ಎಂದರೆ ಕಪ್ಪು ಎಂದರ್ಥ. ಕುಮಾರಸ್ವಾಮಿ  ವಿರುದ್ಧ ಏಕವಚನದ ವಾಗ್ದಾಳಿ ನಡೆಸಿದ್ದ ಜಮೀರ್ ‘ಬಿಜೆಪಿಯವರಿಗಿಂತ ಕರಿಯ ಕುಮಾರಸ್ವಾಮಿ ಡೇಂಜರ್. ಹಿಂದೆ ಹಿಜಾಬ್ ಬೇಡ ಎಂದಿದ್ದೆ. ಈಗ ಮುಸ್ಲಿಮರ ಮತ ಬೇಕಾ? ಕುಮಾರಸ್ವಾಮಿ ಬಿಜೆಪಿಗೆ ಹೋಗಿ ಮುಸ್ಲಿಮರನ್ನು ಖರೀದಿ ಮಾಡ್ತಾನಂತೆ. ಏ ಕುಮಾರಸ್ವಾಮಿ ನಿನ್ ರೇಟ್ ಹೇಳು. ಮುಸಲ್ಮಾನರು ಒಂದೊಂದು ಪೈಸಾ ಹಾಕಿ ನಿನ್ನ ಕುಟುಂಬವನ್ನೇ ಖರೀದಿ ಮಾಡ್ತಾರೆ’ ಎಂದು ಜಮೀರ್ ಹೇಳಿದ್ದಾರೆ.

ಅವರ ಈ ಹೇಳಿಕೆ ಜೆಡಿಎಸ್ ಕೆಂಗಣ್ಣಿಗೆ ಗುರಿಯಾಗಿದೆ. ಇದನ್ನೇ ಜೆಡಿಎಸ್ ಅಸ್ತ್ರವಾಗಿ ಬಳಸಿಕೊಳ್ಳುವ ಸಾಧ್ಯತೆಯಿದೆ. ಈಗಾಗಲೇ ವಕ್ಫ್ ವಿಚಾರದಲ್ಲಿ ಎಡವಟ್ಟು ಮಾಡಿಕೊಂಡು ಕಾಂಗ್ರೆಸ್ ನವರೇ ಜಮೀರ್ ವಿರುದ್ಧ ಕೆಂಡ ಕಾರುತ್ತಿದ್ದಾರೆ. ಈಗ ಕುಮಾರಸ್ವಾಮಿ  ವಿರುದ್ಧ ಇಂತಹ ಪದ ಬಳಕೆ ಮಾಡಿ ವಿವಾದ ಮೈಮೇಲೆಳೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಧಾನಿಯ ರಸ್ತೆ ಗುಂಡಿಯನ್ನು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ತಾಕೀತು

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮುಂದಿನ ಸುದ್ದಿ
Show comments