Publish Date: Fri, 24 May 2019 (09:32 IST)
Updated Date: Fri, 24 May 2019 (09:34 IST)
ಬೆಂಗಳೂರು : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸೇರಿ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವುದಕ್ಕೆ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಬಾರದಿತ್ತು ಎಂದು ಸಚಿವ, ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಅಸಮಾಧಾನ ಹೊರಹಾಕಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಮಾಡಿಕೊಳ್ಳಬಾರದಿತ್ತು. ಮೈತ್ರಿ ಮಾಡಿಕೊಳ್ಳದಿದ್ದರೆ, ಕಾಂಗ್ರೆಸ್ ಪಕ್ಷ 10 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಅವಕಾಶವಿತ್ತು. ಆದರೆ, ಮೈತ್ರಿ ಬಗ್ಗೆ ವರಿಷ್ಠರ ತೀರ್ಮಾನವೇ ಅಂತಿಮ. ಮೈತ್ರಿ ಬೇಡವಾಗಿತ್ತು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ ಅಷ್ಟೆ ಎಂದು ಹೇಳಿದ್ದಾರೆ.
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸುಮಲತಾ ಅಂಬರೀಶ್ ನಮ್ಮ ಪಕ್ಷದ ಅಭ್ಯರ್ಥಿಯಾಗಿದ್ದರೆ ಕಾಂಗ್ರೆಸ್ ಗೆಲ್ಲುತ್ತಿತ್ತು. ಅದೇ ರೀತಿ ರಾಜ್ಯದ ಅನೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿಗೆ ಅವಕಾಶವಿತ್ತು. ಎಂದು ಜಮೀರ್ ಅಹ್ಮದ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.