Select Your Language

Notifications

webdunia
webdunia
webdunia
webdunia

ಹೆಚ್ಚಿನ ಕ್ಷೇತ್ರಗಳಲ್ಲಿ ಜಯಗಳಿಸಿದ್ದರೂ ನಿರೀಕ್ಷಿತ ಫಲಿತಾಂಶ ಬಂದಿಲ್ಲ:ಸಿಎಂ ಸಿದ್ದರಾಮಯ್ಯ

ಹೆಚ್ಚಿನ ಕ್ಷೇತ್ರಗಳಲ್ಲಿ ಜಯಗಳಿಸಿದ್ದರೂ ನಿರೀಕ್ಷಿತ ಫಲಿತಾಂಶ ಬಂದಿಲ್ಲ:ಸಿಎಂ ಸಿದ್ದರಾಮಯ್ಯ
ಬೆಂಗಳೂರು , ಮಂಗಳವಾರ, 23 ಫೆಬ್ರವರಿ 2016 (18:49 IST)
ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಹೆಚ್ಚಿನ ಕ್ಷೇತ್ರಗಳಲ್ಲಿ ಜಯಗಳಿಸಿದ್ದರೂ ನಿರೀಕ್ಷೆಗಿಂತ ಹೆಚ್ಚಿನ ಫಲಿತಾಂಶ ಬಂದಿಲ್ಲ.ಚುನಾವಣಾ ಫಲಿತಾಂಶ ರಾಜ್ಯ ಸರಕಾರಕ್ಕೆ ಮಾನದಂಡವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  
 
ಕನಿಷ್ಠ 16 ರಿಂದ 20 ಕ್ಷೇತ್ರಗಳು ಕಾಂಗ್ರೆಸ್ ಕೈವಶವಾಗುವ ನಿರೀಕ್ಷೆಯಿತ್ತು. ನಿರೀಕ್ಷೆಗೆ ಅನುಗುಣವಾಗಿ ಫಲಿತಾಂಶ ಬಂದಿಲ್ಲ, ಒಟ್ಟಾರೆ ಸ್ಥಾನಗಳಿಗೆ ಹೋಲಿಸಿದಲ್ಲಿ ಹೆಚ್ಚು ಸ್ಥಾನಗಳು ಬಂದಿವೆ ಎಂದು ಹೇಳಿದ್ದಾರೆ.
 
ರಾಜ್ಯದ ಒಟ್ಟು 1083 ಜಿಲ್ಲಾ ಪಂಚಾಯಿತಿಗಳಲ್ಲಿ 496 ರಲ್ಲಿ ಜಯಗಳಿಸಿದ್ದೇವೆ. ಬಿಜೆಪಿ 410 ಸ್ಥಾನಗಳಲ್ಲಿ ಜಯಗಳಿಸಿದ್ದು, ಜೆಡಿಎಸ್ 147 ಸ್ಥಾನಗಳಿಗೆ ತೃಪ್ತಿಪಟ್ಟಿದೆ. ಕಾಂಗ್ರೆಸ್ ಪಕ್ಷದಿಂದ ಶೇ.46 ರಷ್ಟು ಅಭ್ಯರ್ಥಿಗಳು ಚುನಾವಣೆಯಲ್ಲಿ ಜಯಗಳಿಸಿದ್ದಾರೆ ಎಂದರು. 
 
ಕಳೆದ ಜಿಪಂ,ತಾಪಂ ಚುನಾವಣೆಯಲ್ಲಿ ಬಿಜೆಪಿ ಶೇ.43 ರಷ್ಟು ಅಭ್ಯರ್ಥಿಗಳು ಜಯಗಳಿಸಿದ್ದರು. ಪ್ರಸಕ್ತ ಚುನಾವಣೆಯಲ್ಲಿ ಶೇ.38 ರಷ್ಟು ಅಭ್ಯರ್ಥಿಗಳು ಜಯಗಳಿಸಿದ್ದರಿಂದ ಜನಪ್ರಿಯತೆ ಕುಸಿದಿದೆ ಎಂದು ಮಾಹಿತಿ ನೀಡಿದರು.
 
ರಾಜ್ಯದ ಒಟ್ಟು 3884 ತಾಲೂಕು ಪಂಚಾಯಿತಿಗಳಲ್ಲಿ 1700 ಸ್ಥಾನಗಳಲ್ಲಿ ಜಯಗಳಿಸಿದ್ದೇವೆ. ಬಿಜೆಪಿಗಿಂತ 350 ಹೆಚ್ಚು ಸ್ಥಾನಗಳಲ್ಲಿ ಗೆಲುವು ಕಂಡಿದ್ದೇವೆ. 
ಜೆಡಿಎಸ್ 600 ಚಿಲ್ಲರೆ ಕ್ಷೇತ್ರಗಳಲ್ಲಿ ಜಯಗಳಿಸಿದೆ.
 
ಕಳೆದ ಬಾರಿ ಚುನಾವಣೆಗೆ ಹೋಲಿಸಿದಲ್ಲಿ ಕಾಂಗ್ರೆಸ್ ಚೇತರಿಕೆ ಕಂಡಿದೆ. 11 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಅಧಿಕಾರ ಹಿಡಿಯಲಿದ್ದೇವೆ. ಬಿಜೆಪಿ ಎಂಟರಲ್ಲಿ ಅಧಿಕಾರ ಹಿಡಿಯಲಿದ್ದು, ಎರಡು ಜಿಲ್ಲೆಗಳಲ್ಲಿ ಜೆಡಿಎಸ್ ಅಧಿಕಾರದ ಗದ್ದುಗೆ ಏರಲಿದೆ. 9 ಜಿಲ್ಲೆಗಳಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದ್ದಾರೆ.
 
ನಾವು ಜನರ ವಿಶ್ವಾಸವನ್ನು ಉಳಿಸಿಕೊಂಡಿದ್ದೇವೆ,. ಚುನಾವಣೆ ಫಲಿತಾಂಶ ಸರಕಾರದ ಮಾನದಂಡವಲ್ಲ. ಸ್ಥಳೀಯ ವಿಷಯಗಳು, ವ್ಯಯಕ್ತಿಕ ಪ್ರಭಾವ, ಜಾತಿ ಲೆಕ್ಕಾಚಾರಗಳು ಚುನಾವಣೆಯಲ್ಲಿ ಪ್ರಮುಖವಾಗಿರುತ್ತವೆ ಎಂದು ಹೇಳಿದರು. 
 
ರಾಜ್ಯದ ಎಲ್ಲಾ ಮತದಾರರಿಗೆ ಸರಕಾರ ಮತ್ತು ಪಕ್ಷದ ಪರವಾಗಿ ಕೃತಜ್ಞತೆಗಳನ್ನು ಹೇಳಲು ಬಯಸುತ್ತೇನೆ. ಫಲಿತಾಂಶದಿಂದ ಅಭಿವೃದ್ಧಿ ಕಾರ್ಯಗಳನ್ನು ವೇಗಗೊಳಿಸಲು ವೇದಿಕೆಯಾಗಿದೆ. ಸರಕಾರ ಜನತೆಯ ಆಶೋತ್ತರಗಳಿಗೆ ಸ್ಪಂದಿಸಲಿದೆ ಎಂದರು.
 
ಮುಂಬರುವ ದಿನಗಳಲ್ಲಿ ಹೆಚ್ಚಿನ ಕಾರ್ಯಕ್ರಮಗಳನ್ನು ಕೊಡುತ್ತೇವೆ. 2018ರಲ್ಲಿ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಜನತೆಯ ಹತ್ತಿರ ಹೋಗಲು ಪ್ರಯತ್ನ ಪಡುತ್ತೇವೆ. ಜನತೆಯ ಸಂಕಷ್ಟಗಳಿಗೆ ಸ್ಪಂದಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

Share this Story:

Follow Webdunia kannada