ಕನ್ನಡಿಗರ ಅಸ್ಮಿತೆಯಾಗಿರುವ ನಂದಿನಿ ಬ್ರಾಂಡಿಗೆ ಸೆಡ್ಡು ಹೊಡೆಯಲು ಮುಂದಾಗಿರುವ ಅಮುಲ್ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ನಂದಿನಿ ಉಳಿಸಲು ಸಾಮಾಜಿಕ ಜಾಲತಾಣಗಳಲ್ಲಿ KMF ಪರ ಅಭಿಯಾನ ಶುರುವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಮುಲ್ ವಿರುದ್ಧ ಆಕ್ರೋಶ ವ್ಯಕ್ತವಾಗ್ತಿದೆ.. ನಂದಿನಿ ಉಳಿಸಿ ಅಮುಲ್ ತೊಲಗಿಸಿ ಅಭಿಯಾನ ಶುರುಮಾಡಿದ್ದಾರೆ.. ನಂದಿನಿ ಉಳಿಸಿ ಎಂಬ ಘೋಷಣೆ ಪೋಸ್ಟ್ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.. ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರಿಂದ ಟ್ವಿಟರ್ನಲ್ಲಿ ಪೋಸ್ಟ್ ಹಾಕಿ ಅಭಿಯಾನ ಮಾಡಲಾಗ್ತಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಟ್ಯಾಗ್ ಮಾಡಿ ಪೋಸ್ಟ್ ಮಾಡಲಾಗಿದೆ.