Webdunia - Bharat's app for daily news and videos

Install App

ಇಂದಿನಿಂದ 4ದಿನ ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ

Webdunia
ಗುರುವಾರ, 10 ಆಗಸ್ಟ್ 2023 (14:13 IST)
ನಗರದಲ್ಲಿ ಇಂದಿನಿಂದ 4 ದಿನ ಮೆಟ್ರೋ ಸೇವೆಯಲ್ಲಿ ವ್ಯತ್ಯಾಯ ಉಂಟಾಗಲಿದೆ.ಆ. 14ರ ವರೆಗೆ ನೇರಳೆ ಮಾರ್ಗದಲ್ಲಿ 2 ಗಂಟೆ ಸಂಚಾರ ಸ್ಥಗಿತವಾಗಲಿದೆ.ಬೆಳಗ್ಗೆ 5 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ರೈಲು ಸಂಚಾರ ಸ್ಥಗಿತವಾಗಲಿದ್ದು,ಬೈಯಪ್ಪನಹಳ್ಳಿಯಿಂದ ಕೆಆರ್ ಪುರಂ ಮೆಟ್ರೋ ನಿಲ್ದಾಣದದವರೆಗೆ ಸೇವೆ ವಿಸ್ತರಿಸುವ ಸಲುವಾಗಿ ಬಂದ್ ಮಾಡಲಾಗಿದೆ 
 
ಬೈಯಪ್ಪನಹಳ್ಳಿ ಟರ್ಮಿನಲ್‌ನಿಂದ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣ ಹಾಗೂ ಕೃಷ್ಣರಾಜಪುರ ಮತ್ತು ವೈಟ್‌ ಫೀಲ್ಡ್ ಕಾಡುಗೋಡಿ ನಿಲ್ದಾಣಗಳವರೆಗೆ ಸ್ಥಗಿತವಾಗಲಿದೆ.ಮುಂಜಾನೆ 5.00 ಗಂಟೆಯಿಂದ ಬೆಳಗ್ಗೆ 7.00 ಗಂಟೆಯವರೆಗೆ ಸಿಗ್ನಲಿಂಗ್ ಮತ್ತು ಇತರ ಸಂಬಂಧಿತ ಕಾಮಗಾರಿಗಾಗಿ ಮೆಟ್ರೋ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು.ಕಾಮಗಾರಿಯನ್ನು ಪೂರ್ಣಗೊಳಿಸಲು ನಾಳೆ ರವರೆಗೆ ಮತ್ತೆ ಸ್ಥಗಿತಗೊಳಿಸಲಾಗುತ್ತಿದೆ
 
.ಸ್ವಾಮಿ ವಿವೇಕಾನಂದ ಮಾರ್ಗದ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ನಿಲ್ದಾಣದವರೆಗೆ ಮೆಟ್ರೋ ಸಂಚಾರ ಇರುತ್ತದೆ .ಆಗಸ್ಟ್ 14 ರಂದು ಮುಂಜಾನೆ 5.00 ಗಂಟೆಯಿಂದ ಬೆಳಗ್ಗೆ 7.00 ಗಂಟೆಯವರೆಗೆ ಕೆಂಗೇರಿ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವೆ ಯಾವುದೇ ಮೆಟ್ರೋ ಸೇವೆ ಸ್ಥಗಿತವಾಗಲಿದೆ.ಕೆಂಗೇರಿ ನಿಲ್ದಾಣದಿಂದ ಚಲ್ಲಘಟ್ಟ ನಿಲ್ದಾಣದವರೆಗೆ ವಿಸ್ತರಿಸಲು ಸಿಗ್ನಲಿಂಗ್ ಮತ್ತು ಇತರ ಸಂಬಂಧಿತ ಕಾಮಗಾರಿಗಳಿಗಾಗಿಯಿಂದಾಗಿ ಸಂಚಾರ ಬಂದ್ ಮಾಡಲಾಗಿದೆ.
 
ಈ ಸಮಯದಲ್ಲಿ ಬೈಯಪ್ಪನಹಳ್ಳಿ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆ ಲಭ್ಯವಿರುತ್ತದೆ.ಬೆಳಿಗ್ಗೆ 7.00 ಗಂಟೆಯ ನಂತರ, ಬೈಯಪ್ಪನಹಳ್ಳಿ ಮತ್ತು ಕೆಂಗೇರಿ, ಕೃಷ್ಣರಾಜಪುರ ಮತ್ತು ವೈಟ್‌ಫೀಲ್ಡ್ ಕಾಡುಗೋಡಿ ಮೆಟ್ರೋ ನಿಲ್ದಾಣಗಳ ನಡುವೆ ಎಂದಿನಂತೆ ಮೆಟ್ರೋ ರೈಲು ಸೇವೆಗಳು ರಾತ್ರಿ 11.00 ರವರೆಗೆ ಲಭ್ಯವಿರುತ್ತವೆ.ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಹೀಗಾಗಿ ಮೆಟ್ರೋ ಪ್ರಯಾಣಿಕರು ಸಹಕರಿಸುವಂತೆ ಬಿ ಎಂ ಆರ್ ಸಿ ಎಲ್  ಮನವಿ ಮಾಡಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments