Publish Date: Sat, 06 May 2023 (20:24 IST)
Updated Date: Sat, 06 May 2023 (20:35 IST)
ಇಂದು ಕುಂದಾನಗರಿ ಬೆಳಗಾವಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಚಾರ ನಡೆಸಲಿದ್ದಾರೆ. ಯಮಕನಮರಡಿ ಕ್ಷೇತ್ರದ ಭೂತರಾಮನಹಟ್ಟಿ, ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ ಮತಯಾಚಿಸಲಿದ್ದಾರೆ. ಯಮಕನಮರಡಿ ಕ್ಷೇತ್ರದ ಭೂತರಾಮನಹಟ್ಟಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ ನಡೆಸಲಿದ್ದಾರೆ. ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಕ್ಷೇತ್ರವಾಗಿದ್ದು, ಇಂದು ರಾಹುಲ್, ಸತೀಶ್ ಜಾರಕಿಹೊಳಿ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿ, ಬಿಜೆಪಿಗೆ ಟಕ್ಕರ್ ನೀಡಲಿದ್ದಾರೆ.