ನಗರದಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರೆಸ್ಟೀಜ್ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮುನ್ನಾ ಎಂಬ ಕಾರ್ಮಿಕನ ಶವ ಬುಧವಾರ ಪತ್ತೆಯಾಗಿದೆ.
ಕಟ್ಟಡದ ಅವಶೇಷಗಳ ಅಡಿಯಲ್ಲಿ ಕೊಳೆತು ನಾರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಇದನ್ನು ಒರಿಸ್ಸಾ ಮೂಲದ ಕಾರ್ಮಿಕ ಮುನ್ನಾ ಕತ್ವಾ ಎಂದು ಗುರುತಿಸಲಾಗಿದೆ.
ಕಳೆದ ತಿಂಗಳು ಪ್ರೆಸ್ಟೀಜ್ ಕಂಪೆನಿ ಸೇರಿದ ಕಟ್ಟಡ ಇದಾಗಿದ್ದು, ಕಳೆದ ತಿಂಗಳು ಕಟ್ಟಡ ಕುಸಿದು ಬಿದ್ದಿತ್ತು. ಈ ಪ್ರಕರಣದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಪೊಲೀಸರು ಹಾಗೂ ಕಟ್ಟಡದ ಮಾಲೀಕರು ಹೇಳಿಕೆ ನೀಡಿದ್ದರು.
ಅಲ್ಲದೆ, ಈ ಪ್ರಕರಣದಲ್ಲಿ ಒರಿಸ್ಸಾ ಮೂಲದ ವ್ಯಕ್ತಿಯೊಬ್ಬ ತಲೆ ಮರೆಸಿಕೊಂಡಿದ್ದು, ಆತನ ಹುಡುಕಾಟಕ್ಕಾಗಿ ಪೊಲೀಸ್ ತಂಡ ಅಲ್ಲಿಗೆ ತೆರಳಿದೆ ಎಂದು ಪೊಲೀಸರು ತಿಳಿಸಿದ್ದಾರೆ.