ಕೋಲಾರದಲ್ಲಿ ಮೋದಿ ಬೃಹತ್ ಸಮಾವೇಶ

Webdunia
ಗುರುವಾರ, 27 ಏಪ್ರಿಲ್ 2023 (18:50 IST)
ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡ್ತಿದ್ದು, ಅಬ್ಬರದ ಪ್ರಚಾರಕ್ಕೆ ತಯಾರಿ ನಡೆಸಿದ್ದಾರೆ. ಈ ಬಾರಿ ಶತಾಯಗತಾಯ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಮೋದಿ ರಣತಂತ್ರ ರೂಪಿಸಿದ್ದಾರೆ. ಮೋದಿ ಕಾರ್ಯಕ್ರಮ ಹಿನ್ನೆಲೆ ಕೋಲಾರ ತಾಲ್ಲೂಕಿನ ಕೆಂದಟ್ಟಿ ಗ್ರಾಮದ ಬಳಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗುತ್ತಿದೆ. ಇತ್ತೀಚೆಗೆ ಕೋಲಾರದಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್​ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿದ್ದರು. ಇದರ ಬೆನ್ನಲ್ಲೇ ಬಿಜೆಪಿ ನಾಯಕರು ಪ್ರಧಾನಿ ಮೋದಿಯವರನ್ನು ಕರೆಸಿ ಭರ್ಜರಿ ಪ್ರಚಾರ ನಡೆಸಲು ಸಿದ್ಧತೆ ನಡೆಸಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯಾದ್ಯಂತ ಪ್ರಧಾನಿ ಮೋದಿ ಬಿಜೆಪಿ ಪರ ಪ್ರಚಾರ ನಡೆಸಲಿದ್ದು, ಕೋಲಾರದಲ್ಲೂ ಮತಬೇಟೆ ನಡೆಸಲಿದ್ದಾರೆ. ಇಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಜಿಲ್ಲೆಯಲ್ಲಿ ಮತದಾರರನ್ನು ತನ್ನತ್ತ ಸೆಳೆಯಲು ಬಿಜೆಪಿ ಮುಂದಾಗಿದೆ. ಕೆಂದಟ್ಟಿ ಗ್ರಾಮದಲ್ಲಿರುವ ಖಾಸಗಿ ಜಮೀನಿನಲ್ಲಿ ಮೋದಿ ಸಮಾವೇಶಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. 100 ಎಕರೆ ವಿಸ್ತಾರವಾದ ಪ್ರದೇಶದಲ್ಲಿ ನಡೆಯುವ ಸಮಾವೇಶಕ್ಕೆ ಲಕ್ಷಕ್ಕೂ ಅಧಿಕ ಮಂದಿ ಆಗಮಿಸುವ ನಿರೀಕ್ಷೆ ಇದ್ದು, ಬೃಹತ್​ ವೇದಿಕೆ ಮತ್ತು ಜರ್ಮನ್ ಮಾದರಿ ಪೆಂಡಾಲ್ ನಿರ್ಮಾಣ ಮಾಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡಿಗೋ ವಿಮಾನ ಸಮಸ್ಯೆಯಿಂದ ಸಂಕಷ್ಟಕ್ಕೀಡಾದವರಿಗೆ ಇಲ್ಲಿದೆ ಗುಡ್ ನ್ಯೂಸ್

ಸಿದ್ದರಾಮಯ್ಯನವರಿಗೆ ಠಕ್ಕರ್ ಕೊಡಲು ಡಿಕೆ ಶಿವಕುಮಾರ್ ಗೆ ಸಿಕ್ಕಿದೆ ಭರ್ಜರಿ ಅವಕಾಶ

ಸಿದ್ದರಾಮಯ್ಯನವರ ಈ ಗುಟ್ಟು ಹೈಕಮಾಂಡ್ ಗೂ ಗೊತ್ತಿದೆ

Karnataka Weather: ವಾರಂತ್ಯದಲ್ಲಿ ಮಳೆಯಿಲ್ಲ, ಆದರೆ ಹವಾಮಾನ ಎಚ್ಚರಿಕೆ ಗಮನಿಸಿ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments