ಡಿಕೆ ಶಿವಕುಮಾರ್‌ ಸಿಎಂ ಆಗಬೇಕೆಂದ ಮಂಡ್ಯ ಶಾಸಕ, ಕಾರಣ ಕೊಟ್ಟಿದ್ದು ಹಾಗೇ

Sampriya
ಶನಿವಾರ, 22 ನವೆಂಬರ್ 2025 (15:24 IST)
Photo Credit X
ಮಂಡ್ಯ: ನಾಯಕತ್ವ ಬದಲಾವಣೆ ವಿಚಾರ ಜೋರಾಗಿ ಸದ್ದು ಮಾಡುತ್ತಿರುವಾಗಲೇ ಮಂಡ್ಯ ಶಾಸಕ ಗಣಿಗ ರವಿಕುಮಾರ್ ಅವರು ನನ್ನ ಹೃದಯ ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂದು ಬಯಸುತ್ತಿದೆ ಎಂದಿದ್ದಾರೆ. 

ಮಂಡ್ಯದಲ್ಲಿ ಮಾತನಾಡಿದ ಅವರು, ಪಕ್ಷಕ್ಕಾಗಿ ದುಡಿದಿರುವ ಡಿ.ಕೆ ಶಿವಕುಮಾರ್ ಅವರು ಜೈಲಿಗೂ ಹೋಗಿದ್ದಾರೆ.  ನನ್ನ ವೈಯಕ್ತಿಕ ಕಷ್ಟಕಾಲದಲ್ಲಿ ಜೊತೆಗೆ ನಿಂತಿದ್ದಾರೆ. ಅವರಿಗೆ ಸಿಎಂ ಸ್ಥಾನ ಸಿಗಬೇಕು. ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಅವರು ಇಬ್ಬರು ನನಗೆ ಸಮಾನರಾಗಿದ್ದು, ಇಬ್ಬರ ಕೊಡುಗೆ ಪಕ್ಷಕ್ಕೆ ಅಪಾರವಾಗಿದೆ ಎಂದರು. 

140 ಜನ ಶಾಸಕರು ಇಬ್ಬರ ಪರವಾಗಿ ಇದ್ದಾರೆ. ಆದಷ್ಟು ಬೇಗ ಎಲ್ಲವೂ ಒಳ್ಳೆಯದಾಗುತ್ತದೆ, ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ ಎಂದರು. 

ಕೋರ್ಟ್ ಕೆಲಸದ ನಿಮಿತ್ತ ನಾನು ದೆಹಲಿಗೆ ಹೋಗಿದ್ದು, ದೇವರಾಣೆ ನನಗೆ ಇತರ ಶಾಸಕರು ಬರುವ ವಿಚಾರ ಗೊತ್ತಿರಲಿಲ್ಲ. ನಾವು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದು, ಮಂಡ್ಯ ಜಿಲ್ಲೆಗೆ ಎರಡು ಸಚಿವ ಸ್ಥಾನ ಕೇಳಲು ಅಷ್ಟೇ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments