ಆಗ್ನೇಯ ಮತ್ತು ನೈಋತ್ಯ ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ ಮುಂದಿನ 5 ದಿನಗಳವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇನ್ನು ಡಿಸೆಂಬರ್ 4 ಮತ್ತು 5 ರಂದು ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.