ಮೈಸೂರು: ಮುಡಾ ಹಗರಣ ಸಂಬಂದ ಪತ್ನಿ ಪಾರ್ವತಿ ವಿಚಾರಣೆ ಎದುರಿಸಿದ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತರು ಸಮನ್ಸ್ ನೀಡಲು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಎ1 ಆರೋಪಿಯಾಗಿರುವ ಪಾರ್ವತಿ ಅವರನ್ನು ನಿನ್ನೆ ಮೂರು ಗಂಟೆಗಳ ಕಾಲ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಇದೀಗ ಪಾರ್ವತಿ ಅವರ ಹೇಳಿಕೆ ಆಧಾರದ ಮೇಲೆ ಸಿದ್ಧರಾಮಯ್ಯ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಲಿದ್ದಾರೆ ಎನ್ನಲಾಗಿದೆ.
ಮೂರನೇ ಆರೋಪಿ ಸಿದ್ದರಾಮಯ್ಯನವರ ಬಾಮೈದುನ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನು ಮಾಲೀಕ ಜೆ.ದೇವರಾಜು ಅವರನ್ನು ಲೋಕಾಯುಕ್ತ ವಿಚಾರಣೆಗೊಳಪಡಿಸಿದೆ. ದೀಪಾವಳಿ ನಂತರ ಸಿಎಂ ಸಿದ್ದರಾಮಯ್ಯ ಅವರನ್ನು ವಿಚಾರಣೆ ಒಳಪಡಿಸಲು ತನಿಖಾ ತಂಡ ಚಿಂತಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಈ ಪ್ರಕರಣ ಸಂಬಂಧ ಡಿಸೆಂಬರ್ 25ರೊಳಗೆ ವರದಿ ಸಲ್ಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚಿಸಿದೆ.