Select Your Language

Notifications

webdunia
webdunia
webdunia
webdunia

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ ಈ ಜಿಲ್ಲೆಗಳಲ್ಲಿ ಎರಡು ವಾರ ಭಾರೀ ಮಳೆಯ ಮುನ್ಸೂಚನೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ ಈ  ಜಿಲ್ಲೆಗಳಲ್ಲಿ ಎರಡು ವಾರ ಭಾರೀ ಮಳೆಯ ಮುನ್ಸೂಚನೆ

Sampriya

ಬೆಂಗಳೂರು , ಗುರುವಾರ, 12 ಡಿಸೆಂಬರ್ 2024 (20:03 IST)
Photo Courtesy X
ಬೆಂಗಳೂರು:  ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಸಿಲಿಕಾನ್ ಸಿಟಿಯಲ್ಲಿ ಇಂದು ಮೋಡ ಕವಿದ ವಾತಾವರಣದೊಂದಿಹೆ ಜಿಡಿ ಮಳೆಯಾಗಿದೆ. ಇನ್ನೂ ಮುಂದಿನ ಎರಡು ವಾರಗಳ ಕಾಲ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅದರಂತೆ ಕರ್ನಾಟಕದ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ತುಮಕೂರು, ಮೈಸೂರು, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ.

ಬಳ್ಳಾರಿ, ಹಾವೇರಿ, ಉತ್ತರ ಕನ್ನಡ ಕೊಪ್ಪಳ, ಧಾರವಾಡ ಜಿಲ್ಲೆಗಳಲ್ಲಿ ಮೋಡ ಕವಿದಾ ವಾತಾವರಣ ಇರಲಿದ್ದು, ಇಲ್ಲಿನ ಪ್ರತ್ಯೇಕ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಿಗೆ ಯಾವುದೇ ಮಳೆ ಮುನ್ಸೂಚನೆ ಇಲ್ಲ ಎಂದು ತಿಳಿಸಿದೆ.

ಇನ್ನೂ ಡಿಸೆಂಬರ್ 20ರಿಂದ 28ರ ವರೆಗೆ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಗದಗ, ವಿಜಯನಗರ, ಬಳ್ಳಾರಿ, ಕೊಪ್ಪಳ, ಬೆಳಗಾವಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಧಾರವಾಡ, ಹಾವೇರಿ, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಂಚಮಸಾಲಿ ಸಮಾಜದಲ್ಲಿ ಕ್ಷಮೆ ಯಾಚಿಸಿ, ದಬ್ಬಾಳಿಕೆ ಮಾಡಿದ ಅಧಿಕಾರಗಳ ವಿರುದ್ಧ ಕ್ರಮಕ್ಕೆ ವಿಜಯೇಂದ್ರ ಒತ್ತಾಯ