ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿಬಿದ್ದಿದ್ದರು. ಸಾಬೂನು ಮತ್ತು ಮಾರ್ಜಕ ಮಂಡಳಿಯ ಮುಖ್ಯಸ್ಥನಾಗಿದ್ದ ಪ್ರಶಾಂತ್ ಮಾಡಾಳ್ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ ನಡೆಸಿದ್ದು, ಈ ಪ್ರಕರಣದಲ್ಲಿ ಬಿಜೆಪಿ ಮಾಡಾಳ್ ರನ್ನು ಉಚ್ಛಾಟನೆ ಮಾಡಿತ್ತು. ಬಳಿಕ ಮಾಡಾಳ್ ವಿರೂಪಾಕ್ಷಪ್ಪ ಜೈಲುವಾಸವನ್ನೂ ಅನುಭವಿಸಿದ್ದರು. ಕಳೆದ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿತರಾಗಿದ್ದ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ನೀಡಲು ಪಕ್ಷವು ನಿರಾಕರಿಸಿತ್ತು. ಬಳಿಕ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲನ್ನಪ್ಪಿದ್ದರು.
ಈಗ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷ ಮಲ್ಲಿಕಾರ್ಜುನ್ ರನ್ನು ಮತ್ತೆ ಕರೆತಂದಿದ್ದು, ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಮಲ್ಲಿಕಾರ್ಜುನ ಬುಧವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆಯಲಿರುವ ಪಕ್ಷ ಸೇರ್ಪಡೆ ಸಮಾರಂಭದಲ್ಲಿ ಮಲ್ಲಿಕಾರ್ಜುನ್ ಮಾಡಾಳ್ ಕಮಲದ ಬಾವುಟ ಹಿಡಿಯಲಿದ್ದಾರೆ.ನಾಳೆ ರಾಜ್ಯಾಧ್ಯಕ್ಷ ವಿಜಯೇಂದ್ರ ಸಮ್ಮುಖದಲ್ಲಿ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.