Select Your Language

Notifications

webdunia
webdunia
webdunia
webdunia

ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆಂದ ಸಿಎಂ ಸಿದ್ದರಾಮಯ್ಯ

CM Siddaramaiah

Sampriya

ಮೈಸೂರು , ಶುಕ್ರವಾರ, 21 ನವೆಂಬರ್ 2025 (17:23 IST)
ಮೈಸೂರು: ನಾಯಕತ್ವ ಬದಲಾವಣೆ, ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ನಾನು, ಶಿವಕುಮಾರ್ ಸೇರಿದಂತೆ ಎಲ್ಲರೂ ಹೈಕಮಾಂಡ್ ಮಾತನ್ನು ಕೇಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು 'ಕೆಲ ಶಾಸಕರು ದೆಹಲಿ ಭೇಟಿ ನೀಡಿರುವ ಹಿಂದಿನ ವಿಚಾರ ತಿಳಿದಿಲ್ಲ.  ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಇದುವರೆಗೆ ಮಾತನಾಡಿಲ್ಲ. ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆ ಎನ್ನುವ ಮೂಲಕ ಸಿಎಂ ಬದಲಾವಣೆಯಿಲ್ಲ ಎಂಬ ಸೂಚನೆಯನ್ನು ನೀಡಿದ್ದಾರೆ

 ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಬರಲಿದ್ದು, ಶನಿವಾರ ಅವರನ್ನು ಭೇಟಿಯಾಗುತ್ತೇನೆ' ಎಂದರು.

ಸದ್ಯ ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಹಾಗೂ ಸಚಿವ ಸಂಪುಟ ‍ಪುನರ್ ರಚನೆ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿದೆ. ಕಾಂಗ್ರೆಸ್‌ನ ಒಂದು ಬಣ ದೆಹಲಿಯಲ್ಲಿದ್ದರೆ, ಇನ್ನೊಂದು ಬಣದವರು ಡಿನ್ನರ್ ಸಭೆಯಲ್ಲಿ ಮಾತುಕತೆ ನಡೆಸಿದ್ದಾರೆ. ಒಟ್ಟಾರೆ ರಾಜ್ಯ ಕಾಂಗ್ರೆಸ್ ರಾಜಕಾರಣದಲ್ಲಿ ಭಾರೀ ಬೆಳವಣಿಗೆಯಾಗುತ್ತಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ, ಡಿಕೆಶಿ ನಡುವೆ ಬಣ ಬಡಿದಾಟ ಇಲ್ವೇ ಇಲ್ಲ, ಎಲ್ಲಾ ಬಿಜೆಪಿ ಸೃಷ್ಟಿಯಂತೆ