Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಬಂಡವಾಳ ಹೂಡಿಕೆ:ಪ್ರಧಾನಿ

ರಾಜ್ಯದಲ್ಲಿ
ಬೆಂಗಳೂರು , ಶುಕ್ರವಾರ, 3 ಆಗಸ್ಟ್ 2007 (18:25 IST)
ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಬೆಂಗಳೂರು ಮೆಟ್ರೋ ಸೇರಿದಂತೆ ಹಲವು ಯೋಜಿತ ಕಾಮಗಾರಿಗಳ ತುರ್ತು ಮುಕ್ತಾಯಕ್ಕೆ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ.

ಇಂದು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಹಾಗೂ ಹಣಕಾಸು ಸಚಿವ ಚಿದಂಬರಂ ವಿಧಾನ ಸೌಧದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸಚಿವರು, ಸೇರಿದಂತೆ ವಿವಿಧ ಪಕ್ಷದ ನಾಯಕರೊಂದಿಗೆ ಸಮಾಲೋಚನೆ ನಡೆಸಿದರು.

ರಾಜ್ಯಕ್ಕೆ ಇತರೆಡೆಗಳಿಂದ ಬಂಡವಾಳ ಹೂಡುವಿಕೆಗೆ ಅವಕಾಶ ಮಾಡಿಕೊಡುವ ಸಂಬಂಧ ಹಲವು ಯೋಜನೆಗಳ ಬಗ್ಗೆಯೂ ಚರ್ಚೆ ನಡೆಸಿದರು.

ಪ್ರಧಾನಿಯವರ ಆಗಮನ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ವಿಧಾನ ಸೌಧದಲ್ಲಿ ಕಾರ್ಯನಿರ್ವಹಿಸುವ ಸರ್ಕಾರಿ ನೌಕರರಿಗೆ ಸಂಪೂರ್ಣ ರಜೆ ಘೋಷಿಸಲಾಗಿತ್ತು.

ನಗರದ ವಿಧಾನ ಸೌಧ, ರಾಜಭವನ, ಪ್ರದೇಶದ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರವನ್ನುನಿಷೇಧಿಸಲ್ಪಪಟ್ಟ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಕೆ.ಆರ್.ಶ್ರೀನಿವಾಸನ್, ನಗರ ಪೊಲೀಸ್ ಆಯುಕ್ತ ನೀಲಂ ಅಚ್ಯುತ ರಾವ್, ಮತ್ತಿತರ ಹಿರಿಯ ಅಧಿಕಾರಿಗಳು ಭದ್ರತೆಯ ಪರಾಮರ್ಶೆ ನಡೆಸಿದರು.

ನಗರ ಸಶಸ್ತ್ರ ಮೀಸಲು ಪಡೆ, ಕೆಎಸ್.ಆರ್.ಪಿ ಮತ್ತು ಇತರ ಪೊಲೀಸ್ ಪಡೆಗಳನ್ನು ಬಂದೋಬಸ್ತ್ ಭದ್ರತೆ ಕೈಗೊಂಡಿದೆ.

Share this Story:

Follow Webdunia kannada