ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 1.54 ಕೋಟಿ ರೂ. ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕರ್ತವ್ಯ ನಿರತ ಚುನಾವಣೆ ಸಿಬ್ಬಂದಿ ಹಾಗೂ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಹಣವನ್ನು ವಶಕ್ಕೆ ಪಡೆದಿದ್ದಾರೆ. ಹಣದ ದಾಖಲೆ ಕುರಿತು ತನಿಖೆ ನಡೆಯುತ್ತಿದೆ.