ರಾಹುಲ್​​ ವಿರುದ್ಧ J.P. ನಡ್ಡಾ ವಾಗ್ದಾಳಿ

Webdunia
ಶುಕ್ರವಾರ, 17 ಮಾರ್ಚ್ 2023 (18:57 IST)
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಭಾರತದ ವಿರುದ್ಧ ಕೆಲಸ ಮಾಡುತ್ತಿರುವ ಟೂಲ್‌ಕಿಟ್‌ನ ಶಾಶ್ವತ ಭಾಗವಾಗಿದ್ದಾರೆ ಎಂದು BJP ರಾಷ್ಟ್ರೀಯ ಅಧ್ಯಕ್ಷ J.P. ನಡ್ಡಾ ಟೀಕಿಸಿದ್ದಾರೆ. ನಮ್ಮ ದೇಶದ ವ್ಯವಹಾರದಲ್ಲಿ ಅನ್ಯ ದೇಶಗಳು ಮಧ್ಯ ಪ್ರವೇಶಿಸಬೇಕೆಂದು ರಾಹುಲ್ ನೀಡಿದ ಹೇಳಿಕೆ ನಾಚಿಕೆಗೇಡು ಎಂದು ಅವರು ಕಿಡಿಕಾರಿದ್ದಾರೆ.. ‘ದೇಶವು ಪದೇಪದೆ ತಿರಸ್ಕರಿಸಿದ ಬಳಿಕ ರಾಹುಲ್ ಗಾಂಧಿ, ದೇಶ ವಿರೋಧಿ ಟೂಲ್‌ಕಿಟ್‌ನ ಶಾಶ್ವತ ಭಾಗವಾಗಿದ್ದಾರೆ’ ಎಂದು ಅವರು ಕುಟುಕಿದ್ದಾರೆ. ಭಾರತವು ವಿಶ್ವದ 5ನೇ ಅತಿದೊಡ್ಡ ಆರ್ಥಿಕತೆಯಾಗಿದ್ದು, ಜಿ–20 ಸಭೆಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ ರಾಹುಲ್ ಗಾಂಧಿ, ವಿದೇಶಿ ನೆಲದಿಂದ ಭಾರತ, ಸಂಸತ್ ಮತ್ತು ದೇಶದ ಜನರನ್ನು ಅವಮಾನಿಸುವ ಮೂಲಕ ದೇಶ ವಿರೋಧಿಗಳಿಗೆ ಬಲ ನೀಡಿದ್ದಾರೆ ಎಂದು ನಡ್ಡಾ ಟೀಕಿಸಿದ್ದಾರೆ. ಭಾರತದಲ್ಲಿ ಪ್ರಜಾಪ್ರಭುತ್ವದ ಅಂತ್ಯವಾಗಿದೆ. ಯೂರೋಪ್ ಮತ್ತು ಅಮೆರಿಕ ದೇಶಗಳು ಮಧ್ಯಪ್ರವೇಶಿಸಬೇಕೆಂದು ವಿದೇಶಿ ನೆಲದಲ್ಲಿ ನಿಂತು ಹೇಳಿಕೆ ನೀಡಿದ್ದಾರೆ. ಇದಕ್ಕಿಂತ ನಾಚಿಕೆಗೇಡು ಇನ್ನೇನಿದೆ? ಎಂದು ನಡ್ಡಾ ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments