ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಫೆಬ್ರವರಿ 5 ರಿಂದ 7 ರವರೆಗೆ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡಿಗರೆಲ್ಲರೂ ಬಿಚ್ಚು ಮನಸ್ಸಿನಿಂದ ಪಾಲ್ಗೊಳ್ಳಬೇಕು.
ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಯಶಸ್ವಿಗೊಳಿಸಬೇಕು. ಹೀಗಂತ ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಹೇಳಿದ್ರು.
ನುಡಿ ಹಬ್ಬದ ಆಚರಣೆ ನಮ್ಮ ಹಬ್ಬವೆಂಬ ಎಂಬ ಭಾವನೆ ಪ್ರತಿಯೊಬ್ಬರಲ್ಲೂ ಮೂಡಬೇಕು. ಈಗಾಗಲೇ ಕನ್ನಡ ಸಾಹಿತ್ಯ ಪರಿಷತ್‍ದಿಂದ ಎಲ್ಲರಿಗೂ ಆಮಂತ್ರಣ ನೀಡಲಾಗಿದೆ. ಇದರಲ್ಲಿ ಯಾರಿಗೂ ನಿರ್ಲಕ್ಷ್ಯ ಮಾಡಿಲ್ಲ. ಬಿಚ್ಟು ಮನಸ್ಸಿನಿಂದ ಸರ್ವರೂ ಬರಬೇಕೆಂದರು.
ಅಂಗಡಿ ಮುಂಗಟ್ಟುಗಳ ಮಾಲೀಕರು ಸ್ವಯಂ ಪ್ರೇರಿತರಾಗಿ ತಮ್ಮ ಅಂಗಡಿಗಳ ಮುಂದೆ ತಳಿ ತೋರಣ ಕಟ್ಟಬೇಕು. ರಂಗೋಲಿ ಹಾಕಿ ಅಲಂಕಾರ ಮಾಡಬೇಕು. ಜಿಲ್ಲೆಯಲ್ಲಿ ಹಬ್ಬದ ಕಳೆ ತರಬೇಕು ಅಂತ ಜಿಲ್ಲಾಧಿಕಾರಿ ಹೇಳಿದ್ದಾರೆ.